ಯಲ್ಲಾಪುರ: ತಾಲೂಕಿನ ಹೊಸಳ್ಳಿ, ಬೈಂದೂರು ಗ್ರಾಮಗಳ ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲದೇ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಜಯ ಕರ್ನಾಟಕ ಯಲ್ಲಾಪುರ ತಾಲೂಕಾ ಸಂಘಟನೆ ಒತ್ತಾಯಿಸಿದೆ.
ಕೆಎಸ್‍ಆರ್‍ಟಿಸಿ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ವಿದ್ಯಾರ್ಥಿಗಳ ಹಿತ ಕಾಯುವಂತೆ ಒತ್ತಾಯಿಸಿದರು. ಈ ವೇಳೆ ಜಯಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್, ಕಿರವತ್ತಿ ಘಟಕದ ಅಧ್ಯಕ್ಷ ಅಹ್ಮದ್ ಕೋಳಿಕೇರಿ, ಪರಶುರಾಮ ತಿರುಕಪ್ಪನವರ್ ಮತ್ತಿತರರು ಇದ್ದರು.