ಗೋಕರ್ಣ: ಇಲ್ಲಿಯ ಮೊರ್ಡನ ಎಜ್ಯುಕೇಶನ್ ಟ್ರಸ್ಟನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮೊಡರ್ನ ಎಜ್ಯುಕೇಶನ್ ಶಾಲೆಯಲ್ಲಿ ನ.14 ರ ನಿಮಿತ್ತ ಜವಾಹರಲಾಲ್ ನೆಹರು ಜನ್ಮದಿನಾಚರಣೆ ಅಂಗವಾಗಿ ಮಕ್ಕಳ ದಿನಾಚರಣೆ ನಡೆಯಿತು.
ಶಾಲೆಯ ಮುದ್ದು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟದ ಸ್ಪರ್ಧೆಗಳು ನಡೆದವು. ಈ ಸಂದರ್ಭದಲ್ಲಿ ಶಾಲಾ ಮುಖ್ಯಾಧ್ಯಾಪಕ ರಾಜೇಶ ಗೋನ್ಸಾಲ್ವೀಸ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.