ಶಿರಸಿ: ಇಲ್ಲಿಯ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂದು ದೂರೊಂದು ದಾಖಲಾಗಿದೆ. ಬಿಳಿ ಬಣ್ಣದ ಕಾರಿನಲ್ಲಿ ಬಂದ ಮೂವರಿಂದ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂದು ಆಕೆಯ ತಾಯಿ ನಗರದ ಗ್ರಾಮೀಣ ಪೋಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಶಿರಸಿಯ ಬನವಾಸಿ ರಸ್ತೆಯಲ್ಲಿರುವ ಸರಕಾರಿ ಡಿಗ್ರಿ ಕಾಲೇಜು ಸಮೀಪವಿರುವ ಕ್ರಾಸ್ ಒಂದರಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ ಎಂದು ಆರೋಪಿಸಲಾಗಿದೆ.
ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾಗಿರುವ ವಿದ್ಯಾರ್ಥಿನಿ ತಾಲೂಕಿನ ಕಾಳಂಗಿಯವಳಾಗಿದ್ದು, ಪೋಲೀಸರು ಆರೋಪಿಗಳ ಪತ್ತೆ ಬಲೆ ಬೀಸಿದ್ದಾರೆ.