ಹೊನ್ನಾವರ: ಪಟ್ಟಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ಹಾಕಿದ್ದಾರೆ.
ಒಂದು ಕಡೆ ಪ್ಲಾಸ್ಟಿಕ್ ನಿಷೇಧ ಖಡ್ಡಾಯಗೊಳಿಸಬೇಕೆಂದು ಪಟ್ಟಣ ಪಂಚಾಯತ್ ಜಾಗೃತಿ ಮೂಡಿಸುತ್ತಿದ್ದರೆ, ಇನ್ನೊಂದೆಡೆ ಅಂಗಡಿಕಾರರು ಪ್ಲಾಸ್ಟಿಕ್ ಬಳಕೆಯಲ್ಲಿ ನಿರತರಾಗಿದ್ದಾರೆ. ಸೋಮವಾರ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಕರಾದ ಸುನಿಲ್ ಗವಾಡಿ ಹಾಗೂ ಅವರ ತಂಡ ಪಟ್ಟಣದ ಎರಡು ಪ್ರಮುಖ ಅಂಗಡಿಗಳಿಗೆ ದಾಳಿ ನಡೆಸಿ 80 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಹಾಗೂ ಅಂಗಡಿಯ ಮಾಲೀಕರಿಗೆ ದಂಡ ವಿಧಿಸಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.