ದಾಂಡೇಲಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಅವರ ಗೆಲುವಿಗೆ ಹೋರಾಡಲು ಸಿದ್ಧರಾಗಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು. ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಇದುವರೆಗೂ ಉತ್ತಮ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬರುವ ಚುನಾವಣೆಯಲ್ಲೂ ಗೆಲುವು ನಮ್ಮದೇ. ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಬೇಕು ಎಂದರು.
ಘಟಕದ ಅಧ್ಯಕ್ಷ ಚಂದ್ರಕಾಂತ ಕ್ಷೀರಸಾಗರ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅದೇರೀತಿ ಜಿಲ್ಲೆಯಲ್ಲೂ ನಾವು ಜಯಸಾಧಿಸಲಿದ್ದೇವೆ ಎಂದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ, ದಾಂಡೇಲಿ ಪ್ರಭಾರಿ ನಂದು ಗಾಂವ್ಕರ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಕಲಶೆಟ್ಟಿ, ಜೊಯಿಡಾ ಮಂಡಲದ ಅಧ್ಯಕ್ಷ ಸಂತೋಷ ಇತರರು ಇದ್ದರು