ಮುಂಡಗೋಡ: ಶಾಲಾ ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಇಂದೂರ ಗ್ರಾಮದ ವಿದ್ಯಾರ್ಥಿಗಳು ಬಸ್ ನಿಲ್ದಾಣದ ಅಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಕಳೆದ ಹದಿನೈದು ದಿನಗಳಿಂದ ಬೆಳಗ್ಗೆ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ ಇದರಿಂದಾಗಿ ಶಾಲಾ ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ಹೊಗಲು ಸಾಧ್ಯವಾಗುತ್ತಿಲ್ಲ ಈ ಬಗ್ಗೆ ಕಲಘಟಗಿ ಹಾಗೂ ಮುಂಡಗೋಡ ಬಸ್ ನಿಲ್ದಾಣದ ಅಧಿಕಾರಿಗಳು ಹಾಗೂ ಡೀಪೋ ಅಧಿಕಾರಿಗಳಿಗ ಮನವಿ ಸಲ್ಲಿಸಿದರೂ ಯಾವುದೆ ಪ್ರಯೋಜನವಾಗಿಲ್ಲ. ಬಸ್ ಸರಿಯಾದ ಸಮಯಕ್ಕೆ ಬಾರದ ಕಾರಣ ನಾಲ್ಕು ದಿನಗಳ ಹಿಂದೆ ಇಂದೂರನಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದೇವು ನಂತರ ವಾಯುವ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ ಅವರೊಂದಿಗೆ ಮಾತನಾಡಿದ ವಿದ್ಯಾರ್ಥಿಗಳು ಶಾಲಾ ಕಾಲೇಜು ಸಮಯಕ್ಕೆ ಅನುಕೂಲವಾಗುವಂತೆ ಬಸ್ ಓಡಿಸಲು ಕಲಘಟಗಿ ಡೀಪೋ ಅಧಿಕಾರಿಗಳಿಗೆ ಸೂಚಿಸುತ್ತೆವೆಂದು ಹೇಳಿದ್ದರು. ಆದರೂ ಸಹ ಬಸ್ ಬಾರದೆ ಇರುವುದರಿಂದ ಮಂಗಳವಾರ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್ ನಿಲ್ದಾಣಾಧಿಕಾರಿ ಕಚೇರಿಯ ಬಳಿ ಪ್ರತಿಭಟನೆ ನಡೆಸಲು ಮುಂದಾದರೂ. ಈ ಸಂದರ್ಭದಲ್ಲಿ ಪಿಎಸ್‍ಐ ನಿಂಗಪ್ಪ ಜಕ್ಕಣ್ಣವರ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ನಂತರ ಕಲಘಟಗಿ ಬಸ್ ಡೀಪೋ ಅಧಿಕಾರಿಗಳ ಜೋತೆ ಮಾತನಾಡಿ ನಾಳೆಯಿಂದ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ತಿಳಿಸಿದರು. ನಂತರ ಅಧಿಕಾರಿಗಳ ಭರವಸೆಯಿಂದ ವಿದ್ಯಾರ್ಥಿಗಳು ಮನವಿ ಕೊಟ್ಟು ಶಾಲಾ ಕಾಲೇಜಗೆ ತೆರಳಿದರು.