• Slide
  Slide
  Slide
  previous arrow
  next arrow
 • ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಸೂಕ್ತ ಪರಿಹಾರ; ಪರಿಷತ್’ನಲ್ಲಿ ಗೆಲುವು ನಮ್ಮದೇ; ಬಿ.ಎಸ್. ಯಡ್ಯೂರಪ್ಪ

  300x250 AD

  ಯಲ್ಲಾಪುರ: ಬಿಟ್ ಕಾಯಿನ್ ಬಗ್ಗೆ ಮಾಹಿತಿ ಇಲ್ಲದೇ ಚರ್ಚೆಯಾಗುತ್ತಿದೆ. ಯಾರಲ್ಲಿ ಈ ಬಗ್ಗೆ ಸರಿಯಾದ ಮಾಹಿತಿ ಇದೆಯೊ ಅವರು ನೀಡಿದರೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾವ ಪಕ್ಷದವರೇ ಆದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

  ಪಟ್ಟಣದಲ್ಲಿ ಗುರುವಾರ ಜನಸ್ವರಾಜ್ ಸಮಾವೇಶದ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉ.ಕ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಭತ್ತ, ಅಡಕೆ, ಶುಂಠಿ, ಜೋಳ ಮುಂತಾದ ಬೆಳೆಗಳಿಗೆ ಹಾನಿಯಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಶೀಘ್ರ ಆ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.

  ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುತ್ತೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140 ಕ್ಷೇತ್ರಗಳನ್ನು ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  300x250 AD

  ಪ್ರಸ್ತುತ ವಿ.ಪ ಚುನಾವಣೆಯಲ್ಲಿ 15 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.

  ಸುದ್ದಿಗೋಷ್ಟಿಯಲ್ಲಿ ಭಾಜಪಾ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಸಾರಿಗೆ ಸಚಿವ ಬಿ. ಶ್ರೀರಾಮುಲು, ರವಿಕುಮಾರ್, ಶಾಸಕ ಸುನೀಲ್ ನಾಯ್ಕ, ಶಾಸಕಿ ರೂಪಾಲಿ ನಾಯ್ಕ, ವಿ.ಎಸ್. ಪಾಟೀಲ್, ಶಾಂತಾರಾಮ ಸಿದ್ದಿ, ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ, ಶಿರಸಿ ತಾಲೂಕು ಮಾದ್ಯಮ ಸಂಚಾಲಕ ಡ್ಯಾನಿ ಸೇರಿದಂತೆ ಇನ್ನಿತರರು ಇದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top