ಶಿರಸಿ: ಉಪನ್ಯಾಸಕರು ನಮ್ಮ ವೃತ್ತಿಯಲ್ಲಿ ನಿರಂತರ ಅಧ್ಯಯನದಲ್ಲಿ ತೊಡಗಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಹನುಮಂತಪ್ಪ ನಿಟ್ಟೂರ ಅವರು ಹೇಳಿದರು.
ಅವರು ನಗರದ ಮಾರಿಕಾಂಬಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಅರ್ಥಶಾಸ್ತ್ರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಸಮರ್ಥ ಆರ್ಥಿಕ ಮಾತ್ರ ದೇಶದಲ್ಲಿ ಸ್ಥಿರ ಆರ್ಥಿಕ ಅಭಿವೃದ್ಧಿ ಸ್ಥಾಪಿಸಲು ಸಾಧ್ಯ. ಕಾರಣ ವಿದ್ಯಾರ್ಥಿಗಳಿಗೆ ಆರಂಭದಲ್ಲೇ ಈ ಕ್ಷೇತ್ರದ ಬಗ್ಗೆ ಆಸಕ್ತಿ ಬೆಳೆಸುವ ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಬಾಲಚಂದ್ರ ಭಟ್, ಅರ್ಥಶಾಸ್ತ್ರ ವೇದಿಕೆ ಅಧ್ಯಕ್ಷ ಡಾ.ವಿನಾಯಕ ಜಿ. ನಾಯಕ, ನಿವೃತ್ತ ಪ್ರಾಚಾರ್ಯ ಪಿ.ಕೆ. ಚಪಗಾಂವಕರ ಇತರರು ಇದ್ದರು.