ಯಲ್ಲಾಪುರ: ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅವರು ಪಟ್ಟಣದ ಈಶ್ವರೀಯ ವಿಶ್ವವಿದ್ಯಾಲಯದ ಆವಾರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಜನಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಗೆಲ್ಲುವ ಮೂಲಕ ಬಹುಮತ ಪಡೆಯಲಿದೆ ಎಂದರು. ಸಂಘಟನೆ ಬಲಗೊಂಡರೆ ಮಾತ್ರ ಎಲ್ಲ ಚುನಾವಣೆಗಳಲ್ಲಿ ಯಶಸ್ಸು ಸಾಧ್ಯ ಎಂದರು.
ಸಾರಿಗೆ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಠೇವಣಿ ಕಳೆದುಕೊಳ್ಳುವುದು ಖಚಿತ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಮಾತನಾಡಿ, ಜಿಲ್ಲೆಯಲ್ಲಿ ನಿರಂತರವಾಗಿ ಪಕ್ಷ ಸಂಘಟನೆ ಕಾರ್ಯ ನಡೆಯುತ್ತಿದ್ದು, ಯಾವ ಚುನಾವಣೆ ಬಂದರೂ ಪಕ್ಷ ಸೋಲದಷ್ಟು ಧೃಢತೆಯನ್ನು ಪಡೆಯುತ್ತಿದೆ. ಜಿಲ್ಲೆಯಲ್ಲಿ ಚುನಾವಣೆಗೆ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗದ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಉ.ಕ ಕ್ಷೇತ್ರದಲ್ಲಿ ಬಿಜೆಪಿ ಪ್ರಥಮ ಬಾರಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಮಾತನಾಡಿದರು. ಜಿಲ್ಲೆಯ ವಿವಿಧೆಡೆಯ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ, ಶಾಸಕರಾದ ರೂಪಾಲಿ ನಾಯ್ಕ, ದಿನಕರ ಶೆಟ್ಟಿ, ಸುನೀಲ ನಾಯ್ಕ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ವಾ.ಕ.ರ.ಸಾ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ, ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪ್ರಮುಖರಾದ ಸುನೀಲ ಹೆಗಡೆ, ಮೋಹನ ಲಿಂಬೆಕಾಯಿ, ಗಣಪತಿ ಉಳ್ವೆಕರ್, ಕೆ.ಜಿ.ನಾಯ್ಕ, ಎನ್.ಎಸ್.ಹೆಗಡೆ, ಗಿರೀಶ ಪಟೇಲ, ಗಂಗಾಧರ ಭಟ್ಟ, ಅಜಿತ ಹೆಗಡೆ ಇತರರಿದ್ದರು. ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ಟ ಬರಗದ್ದೆ ನಿರ್ವಹಿಸಿದರು. ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕಾರ ವಂದಿಸಿದರು.