• Slide
    Slide
    Slide
    previous arrow
    next arrow
  • ಕೇಂದ್ರದ 3 ಕೃಷಿ ಕಾಯ್ದೆ ವಾಪಸ್; ಪ್ರಧಾನಿ ಮೋದಿ ಘೋಷಣೆ

    300x250 AD


    ನವದೆಹಲಿ: ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಣೆ ಮಾಡಿದ್ದಾರೆ.

    ಗುರು ನಾನಕ್‌ ಜಯಂತಿಯ ಹಿನ್ನೆಲೆಯಲ್ಲಿ ಅವರು ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು, ಇಂದು ನಾನು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ಎಲ್ಲರಿಗೂ ಹೇಳಲು ಬಯಸುತ್ತೇನೆ ಎಂದಿದ್ದಾರೆ.

    ಮೂರು ಕೃಷಿ ಕಾಯ್ದೆಗಳ ವಿರುದ್ಧ ಕೆಲವು ರೈತರು ಕಳೆದ ಒಂದೂವರೆ ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

    300x250 AD

    ರೈತರ ಶ್ರಮಕ್ಕೆ ತಕ್ಕ ಫಲ ಸಿಗುವಂತೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾವು ಗ್ರಾಮೀಣ ಮೂಲಸೌಕರ್ಯ ಮಾರುಕಟ್ಟೆಯನ್ನು ಬಲಪಡಿಸಿದ್ದೇವೆ. ನಾವು ಎಂಎಸ್‌ಪಿ ಹೆಚ್ಚಿಸಿರುವುದು ಮಾತ್ರವಲ್ಲದೆ ದಾಖಲೆಯ ಸರ್ಕಾರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ನಮ್ಮ ಸರ್ಕಾರದ ಖರೀದಿ ಕಳೆದ ಹಲವು ದಶಕಗಳ ದಾಖಲೆಯನ್ನು ಮುರಿದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

    ರೈತರಿಗೆ ಸಮಂಜಸವಾದ ದರದಲ್ಲಿ ಬೀಜಗಳನ್ನು ಮತ್ತು ಸೂಕ್ಷ್ಮ ನೀರಾವರಿ, 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್‌ಗಳಂತಹ ಸೌಲಭ್ಯಗಳನ್ನು ಒದಗಿಸುವಲ್ಲಿ ನಾವು ಕೆಲಸ ಮಾಡಿದ್ದೇವೆ. ಇಂತಹ ಅಂಶಗಳು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಕಾರಣವಾಗಿವೆ. ನಾವು ಫಸಲ್ ಬಿಮಾ ಯೋಜನೆಯನ್ನು ಬಲಪಡಿಸಿದ್ದೇವೆ, ಹೆಚ್ಚಿನ ರೈತರನ್ನು ಅದರ ಅಡಿಯಲ್ಲಿ ತಂದಿದ್ದೇವೆ ಎಂದಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top