ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್‍ನಲ್ಲಿ ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದ ಹಿನ್ನೆಲೆಯಲ್ಲಿ ರಾಜ್ಯ ಅನ್ನದಾತ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದವರು ಶುಕ್ರವಾರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ರಾಜ್ಯಾಧ್ಯಕ್ಷ ಚಿದಾನಂದ ಹರಿಜನ ಮಾತನಾಡಿ, ಅನ್ನದಾತರ ಸತತ ಹೋರಾಟಕ್ಕೆ ಕೇಂದ್ರ ಸರ್ಕಾರ ಕೊನೆಗೂ ಮಣಿದು ಕೃಷಿ ನೀತಿಯನ್ನು ಹಿಂಪಡೆದುಕೊಂಡಿದೆ. ಕೃಷಿ ಕಾಯ್ದೆಯಿಂದ ರೈತರಿಗೆ ಲಾಭಕ್ಕಿಂತ ನಷ್ಟ ಹೆಚ್ಚಾಗಿತ್ತು. ಇದರಿಂದಾಗಿ ರೈತರು ಪ್ರತಿಭಟನೆಗೆ ಮುಂದಾಗಿದ್ದರು. ಮೂರು ಕೃಷಿ ನೀತಿಗಳನ್ನು ಹಿಂಪಡೆದುಕೊಂಡಿರುವುದರಿಂದ ರೈತ ಸಮುದಾಯಕ್ಕೆ ಸಂತಸ ತಂದಿದೆ ಎಂದರು.
ರೈತ ಮುಖಂಡರಾದ ಹನುಮಂತ ಆರೆಗೊಪ್ಪ, ಗೋವಿಂದ ಬೆಂಡಲಗಟ್ಟಿ, ಎಂ.ಎಚ್.ಹಾನಗಲ್, ರಬ್ಬಾನಿ ಪಟೇಲ್, ಶಾಂತಪ್ಪಗೌಡ ಪಾಟೀಲ ಮುಂತಾದವರು ಉಪಸ್ಥಿರಿದ್ದರು.