ಬೆಂಗಳೂರು: ರಾಜ್ಯದ ಹಲವು ಭಾಗಗಳು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಸಧ್ಯ ಮಳೆಯಿಂದ ಭಾರಿ ಹಾನಿಯಾಗಿರುವ ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ. ಕೂಡಲೇ ಹಣ ಬಿಡುಗಡೆ ಮಾಡುವಂತೆ ಡಿಸಿಗೆ ಸೂಚಿಸಿದ್ದೇನೆ’ ಎಂದರು. ಮತ್ತು ನೆಲಸಮವಾದ ಮನೆಗಳಿಗೆ 5 ಲಕ್ಷ ರೂಪಾಯಿ, ಅಲ್ಪಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ 50 ಸಾವಿರ ಕೂಡಲೇ ಹಣ ಬಿಡುಗಡೆ ಮಾಡುವಂತೆ ಡಿಸಿಗೆ ಸೂಚಿಸಿದ್ದೇನೆ’ ಎಂದರು.
ಇನ್ನು ಪ್ರವಾಹ ಪೀಡಿತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ಬಿಡುಗಡೆ ಆಗಿದ್ದು, ರಾಜ್ಯದ 16 ಜಿಲ್ಲೆಗಳಿಗೆ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ. ಜುಲೈ, ಆಗಸ್ಟ್‍ನಲ್ಲಿ ಅತಿವೃಷ್ಟಿಯಿಂದಾದ ಹಾನಿಗೆ ಸರ್ಕಾರ ಈ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದ್ದು, ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ಅಡಿಯಲ್ಲಿ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.