ಯಲ್ಲಾಪುರ: ಕೆಎಸ್ಸಾರ್ಟಿಸಿ ಬಸ್ಸಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡು ಬಸ್ಸು ಗಟಾರಕ್ಕೆ ಉರುಳಿದ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಆರತಿಬೈಲ್ ಬಳಿ ನಡೆದಿದೆ.
ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಕಾರಿನ ಚಾಲಕನ ನಿರ್ಲಕ್ಷಿತ ಚಾಲನೆಯಿಂದಾಗಿ ಆರತಿಬೈಲ್ ತಿರುವಿನಲ್ಲಿ ಓವರ್ ಟೇಕ್ ಮಾಡುವ ಬರದಲ್ಲಿ ಎದುರಿನಿಂದ ಅಂಕೋಲಾ ಕಡೆಯಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ ಬಸ್ ಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬಸ್ ಹೆದ್ದಾರಿ ಪಕ್ಕದ ಗಟಾರದಲ್ಲಿ ಪಲ್ಟಿಯಾಗಿ ಬಿದ್ದಿದೆ. ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ನಲ್ಲಿದ್ದ ಒಂದೆರಡು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಬಸ್ ಹಾಗೂ ಕಾರು ಜಖಂ ಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪೆÇೀಲಿಸರು ಪ್ರಕರಣ ಪರಿಶೀಲಿಸಿದ್ದಾರೆ.