ಶಿರಸಿ: ಸ್ಥಳೀಯ ಸಂಸ್ಥೆಗಳ ಚುನಾಯುವ ಪ್ರತಿನಿಧಿಗಳ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಉತ್ತರ ಕನ್ನಡ ಜಿಲ್ಲೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ ಇಂದು ಮಂಗಳವಾರ ಕಾರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10.30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ಮಾಜಿ ಸಚಿವ ಹಾಗೂ ಹಳಿಯಾಳದ ಶಾಸಕ ಆರ್.ವಿ.ದೇಶಪಾಂಡೆ, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ, ಎಸ್.ಎಲ್. ಘೋಟ್ನೇಕರ್, ಮಾಜಿ ಶಾಸಕ ಮಧು ಬಂಗಾರಪ್ಪ, ಸತೀಶ ಸೈಲ್, ಮಂಕಾಳು ವೈದ್ಯ, ಶ್ರೀಮತಿ ಶಾರದಾ ಶೆಟ್ಟಿ ಸೇರಿದಂತೆ ಪಕ್ಷದ ಹಿರಿಯ ನಾಯಕರ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸುತ್ತಿದ್ದಾರೆ.