ಹೊನ್ನಾವರ: ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರನ್ನಾಗಿ ನಗರದ ಕೃಷ್ಣಾ ಹರಿಜನ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ ಆದೇಶ ನೀಡಿದ್ದು, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸಂಚಾಲಕರನ್ನಾಗಿ ಬಾಸ್ಕೇರಿಯ ಈಶ್ವರ ಬೀರಾ ಮುಕ್ರಿ ಹಾಗೂ ಜಿಲ್ಲಾ ಸಮಿತಿಯ ಸದಸ್ಯರನ್ನಾಗಿ ಹೊನ್ನಾವರ ಬ್ಲಾಕ್ ಪರಿಶಿಷ್ಟ ಜಾತಿ ವಿಭಾಗದ ಮಾಜಿ ಅಧ್ಯಕ್ಷ ಸೋಮಯ್ಯ ಜಟ್ಟಿ ಮುಕ್ರಿ ಇವರನ್ನು ನೇಮಿಸಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ತಿಳಿಸಿದ್ದಾರೆ.