ಬೆಂಗಳೂರು: ಈಗಾಗಲೇ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ನ. 26 ಕ್ಕೆ ರಾಜ್ಯದಲ್ಲಿ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದೆ ಎಂದು ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ ಮತ್ತು ತುಮಕೂರಿನಲ್ಲಿ ನ.26ರಿಂದ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಅಂತ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇರುವುದರಿಂದ ಈ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತ ತಿಳಿಸಿದೆ.