ಕಾರವಾರ: ಇಲ್ಲಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೋರ್ಚಾ ಅಧ್ಯಕ್ಷ ಮುರಳಿ ಗೋವೇಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರರ ಪ್ರಕೋಷ್ಠದ ಸದಸ್ಯ ಗಣಪತಿ ಉಳ್ವೇಕರ, ರಾಜ್ಯ ಓಬಿಸಿ ಕಾರ್ಯಕಾರಣಿ ಸದಸ್ಯ ರಾಜೇಂದ್ರ ನಾಯ್ಕ, ನಗರ ಮಂಡಲಾಧ್ಯಕ್ಷ ನಾಗೇಶ ಕುರ್ಡೇಕರ್, ವಿಶೇಷ ಆಹ್ವಾನಿತ ಮನೋಜ್ ಭಟ್, ಮುಖಂಡರಾದ ರಾಜೇಶ್ ನಾಯ್ಕ ಮಾತನಾಡಿದರು.
ಈ ಸಂದರ್ಭದಲ್ಲಿ ಉತ್ತರಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯಾಗಿ ಆಯ್ಕೆಯಾದ ಗಣಪತಿ ಉಳ್ವೇಕರ್ ಅವರಿಗೆ ಓಬಿಸಿ ಮೋರ್ಚಾ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಣಿ ಸದಸ್ಯ ಸುನಿಲ್ ಥಾಮ್ಸೆ, ಅಂಕೋಲಾ ಪ್ರಧಾನ ಕಾರ್ಯದರ್ಶಿ ರಘು ಗೌಡ, ಉಪಾಧ್ಯಕ್ಷ ಸಂದೇಶ ಶೆಟ್ಟಿ, ಸದಸ್ಯರಾದ ವಿನಾಯಕ ಶೆಟ್, ನಿತಿನ ರಾಯ್ಕರ್, ವಿನೋದ ರಾಯ್ಕರ್, ಸಂದೀಪ್ ಗೋಕರ್ಣಕರ್, ಸೋಮನಾಥ್ ಸಾಲ್ಗೊಂಕರ್, ಗಣಪತಿ ಗುನಗಿ, ಶ್ವೇತಾ ಭಟ್ಕಳ್ಕರ್, ವಿಜಯಾ ವೆರ್ಣೇಕರ್ ಹಾಗೂ ಅಶೋಕ್ ಗೌಡ ಇದ್ದರು.