ಅಂಕೋಲಾ: ತಾಲೂಕಿನ ಶಿರಕುಳಿಯ ಜಿಲ್ಲಾ ಹಾಲಕ್ಕಿ ಸಮುದಾಯ ಭವನದಲ್ಲಿ ನ.23ಕ್ಕೆ ಉ.ಕ ಜಿಲ್ಲಾ ಹಾಲಕ್ಕಿ ಒಕ್ಕಲಿಗರ ಸಂಘದ ಸಭೆಯನ್ನು ಮಧ್ಯಾಹ್ನ 3 ಗಂಟೆಗೆ ಕರೆಯಲಾಗಿದೆ ಎಂದು ಸಂಘದ ಅಧ್ಯಕ್ಷ ಹನುಮಂತ ಗೌಡ ಪ್ರಕಣೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಮುಖ್ಯವಾಗಿ ಸಮಾಜದ ಪ್ರತಿಭಾ ಪುರಸ್ಕಾರದ ಬಗ್ಗೆ ಚರ್ಚಿಸುವುದು ಮತ್ತು ಅಧ್ಯಕ್ಷರಿಂದ ಬರಬಹುದಾದ ವಿಷಯಗಳ ಕುರಿತು ಚರ್ಚಿಸಲಾಗುವುದು. ಈ ಸಭೆಗೆ ಸಂಘದ ಎಲ್ಲಾ ಪದಾಧಿಕಾರಿಗಳು, ಸಮಾಜ ಬಾಂಧವರು ಆಗಮಿಸುಂತೆ ಹೇಳಿದ್ದಾರೆ.