ಕಾರವಾರ: ವಿಧಾನಪರಿಷತ್ ಚುನಾವಣೆಗೆ ಉತ್ತರ ಕನ್ನಡದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೀಮಣ್ಣ ನಾಯ್ಕ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವಾಗ ಅವರೊಂದಿಗೆ ಪಕ್ಷದ ಮುಖಂಡರಾದ ಮಧು ಬಂಗಾರಪ್ಪ, ಸತೀಶ ಸೈಲ್, ಶಾರದಾ ಶೆಟ್ಟಿ, ಮಂಕಾಳ ವೈದ್ಯ ಇದ್ದರು.
ಮಿತ್ರ ಸಮಾಜದಿಂದ ಪಾದಯಾತ್ರೆಯಲ್ಲಿ ಬರುವಾಗ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ, ವಿಧಾನಪರಿಷತ್ ಸದಸ್ಯ ಎಸ್.ಎಲ್.ಘೋಟೇಕರ್ ಸೇರಿದಂತೆ ಹಲವು ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.