• Slide
    Slide
    Slide
    previous arrow
    next arrow
  • ವಿ.ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಗಣಪತಿ ಉಳ್ವೇಕರ್ ನಾಮಪತ್ರ ಸಲ್ಲಿಕೆ

    300x250 AD

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.

    ನಗರದ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಅವರು ಪಾದಯಾತ್ರೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದರು. ಈ ಸಂದರ್ಭದಲ್ಲಿ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ಉಪಾಧ್ಯಕ್ಷ ಗೋವಿಂದ ನಾಯ್ಕ ಹಾಗೂ ಕಾರ್ಯಕರ್ತರು ಜೊತೆಗಿದ್ದರು.

    300x250 AD

    ಕಳೆದ ಬಾರಿಯೂ ಸ್ಪರ್ಧಿಸಿದ್ದ ಉಳ್ವೇಕರ್, ಕಾಂಗ್ರೆಸ್‍ನ ಶ್ರೀಕಾಂತ ಘೋಟೇಕರ್ ವಿರುದ್ಧ ಪರಾಭವಗೊಂಡಿದ್ದರು. ಅವರೀಗ ಎರಡನೇ ಬಾರಿಗೆ ಸ್ಪರ್ಧೆಯಲ್ಲಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top