ಶಿರಸಿ: ಅಡಿಕೆ ಬೆಳೆಗಳಿಗೆ ಹೆಚ್ಚಿನ ಬೆಲೆ ಇದ್ದುದರಿಂದ ಅಡಿಕೆ ಬೆಳೆಗಾರರು ಎಚ್ಚರಿಕೆಯಿಂದ ಇರಬೇಕು, ತಮ್ಮ ಭಾಗದಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಅಥವಾ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದು ಶಿರಸಿ ಪೋಲೀಸ್ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕಳ್ಳತನಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿಕೊಳ್ಳುವುದು, ತೋಟದ ಕೆಲಸಗಳಿಗೆ ಅಪರಿಚಿತ ವ್ಯಕ್ತಿಯನ್ನು ಇಟ್ಟುಕೊಳ್ಳಬಾರದು. ಆದಷ್ಟು ಜಾಗೃತಿಯನ್ನು ಉಂಟುಮಾಡಬೇಕು. ಅಡಿಕೆ ವ್ಯಾಪಾರಸ್ಥರೂ ಸಹ ಅಡಿಕೆಯನ್ನು ಖರೀದಿಸುವಾಗ ಮಾರಾಟಗಾರರ ಬಗ್ಗೆ ವಿವರವಾದ ಮಾಹಿತಿಯನ್ನು ಪಡೆದುಕೊಂಡಿರಬೇಕು ಎಂದು ಪ್ರಕಟಣೆ ತಿಳಿಸಿದೆ.