ಶಿರಸಿ: ಶಿರಸಿಯಲ್ಲಿ ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಿನದ ಹಿಂದೆ 15 ಜನರನ್ನು ವಶಕ್ಕೆ ಪಡೆದು ವೈದ್ಯಕೀಯ ವಿಜ್ಞಾನ ಪರೀಕ್ಷೆಗೆ ಒಳಪಡಿಸಿದ್ದು, 12 ಜನರು ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢವಾಗಿದೆ.
ಗಾಂಜಾ ಸೇವನೆ ಮತ್ತು ಪೆಡ್ಲರ್ ಪ್ರಕರಣ ಸಂಬಂಧ ಶಿರಸಿ ಮಾರುಕಟ್ಟೆ ಪೊಲೀಸರು ದಾಳಿ ಮಾಡಿ 15 ಜನರನ್ನು ವೈದ್ಯಕೀಯ ತಪಾಸಣೆಗೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದರು. ಇದೀಗ 12 ಜನರ ಸೇವನೆ ಬಗ್ಗೆ ದೃಢಪಟ್ಟಿರುವುದು ಶಿರಸಿಯಲ್ಲಿ ಗಾಂಜಾ ಸೇವನೆ ಪ್ರಕರಣ ಹೆಚ್ಚುತ್ತಿರುವುದು ಆತಂಕಕಾರಿ ಎನ್ನುವಂತಾಗಿದೆ.