Slide
Slide
Slide
previous arrow
next arrow

ವಸತಿ ಶಾಲೆ ಖಾಲಿ ಸ್ಥಾನ ಭರ್ತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2021-22 ನೇ ಶೈಕ್ಷಣಿಕ ಸಾಲಿನ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಉಳಿದ ಸ್ಥಾನಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

300x250 AD

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಮತ್ತು ವಿಶೇಷ ವರ್ಗದ ಆಸಕ್ತ ವಿದ್ಯಾರ್ಥಿಗಳು ನ. 30 ರೊಳಗಾಗಿ ಆಯಾ ತಾಲೂಕಿನ ಸಮಾಜಕಲ್ಯಾಣ ಇಲಾಖೆ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಹಾಗೂ ವಸತಿ ಶಾಲೆಯ ಪ್ರಾಂಶುಪಾಲರಿಂದ ಅರ್ಜಿ ನಮೂನೆಯನ್ನು ಪಡೆದು ಜಾತಿ, ಆದಾಯ ಮತ್ತು ವಿಶೇಷ ವರ್ಗದ ಪ್ರಮಾಣ ಪತ್ರದೊಂದಿಗೆ ಪ್ರಾಂಶುಪಾಲರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8277340393, 9449916292 ಸಂಪರ್ಕಿಸಬಹುದೆಂದು ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕರ ಲಕ್ಷಣ ಬಬಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top