ಶಿರಸಿ: ಎಂಇಎಸ್’ನ ಎಂ.ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎನ್‍ಸಿಸಿ, ಎನ್.ಎಸ್.ಎಸ್, ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಹಾಗೂ ಟಿಎಸ್‍ಎಸ್ ರಕ್ತನಿಧಿಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ರಕ್ತದಾನ ಶಿಬಿರದಲ್ಲಿ ಸುಮಾರು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಮಹಾವಿದ್ಯಾಲಯದ ಮೋಟಿನ್ಸ್‍ರ್ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಕ್ತನಿಧಿ ಘಟಕದ ನಿರ್ದೇಶಕ ಡಾ.ಪಿ ಎಸ್ ಹೆಗಡೆ ಇಂದಿನ ಯುವ ಜನರು ದೈಹಿಕವಾಗಿ ಸಶಕ್ತರಾಗಿದ್ದು, ಪ್ರತಿಯೊಬ್ಬರೂ ರಕ್ತ ದಾನ ಮಾಡಬಹುದು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ರಕ್ತದ ಅಗತ್ಯ ಇದ್ದಾಗ ಈ ಕಾಲೇಜಿನ ಅನೇಕ ವಿದ್ಯಾರ್ಥಿಗಳು ರಕ್ತ ನೀಡಿ ಅನೇಕ ರೋಗಿಗಳಿಗೆ ಸಹಾಯ ಮಾಡಿದ್ದಾರೆ. ಎಲ್ಲರೂ ದಾನದ ಮನೋಭಾವ ರೂಪಿಸಿಕೊಳ್ಳಿ ಎಂದರು.
ಕಾಲೇಜಿನ ಪ್ರಾಚಾರ್ಯೆ ಡಾ.ಕೋಮಲಾ ಭಟ್ ಪ್ರಾಸ್ತಾವಿಸಿ ಸ್ವಾಗತಿಸಿದರು. ರೆಡ್ ಕ್ರಾಸ್ ಅಧಿಕಾರಿ ರಾಘವೇಂದ್ರ ಹೆಗಡೆ ವಂದಿಸಿದರು. ಕು.ಪ್ರಮಿಳಾ ನಿರೂಪಿಸಿದರು. ನಂತರ ತೋಟಗಾರ್ಸ್ ರಕ್ತನಿಧಿ ಕೇಂದ್ರದಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.