ಅಂಕೋಲಾ: ಸ್ಥಳೀಯ ಸಂಸ್ಥೆ ಚುನಾಯಿತ ಪ್ರತಿನಿಧಿಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ ರವರು ಅಗಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಹಿಲ್ಲೂರಿನಲ್ಲಿ ಮತಯಾಚನೆ ಮಾಡಿದರು.
ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಚುನಾವಣಾ ಜಿಲ್ಲಾ ಉಸ್ತುವಾರಿ ಗೋವಿಂದ ನಾಯ್ಕ, ಮಂಡಲಾಧ್ಯಕ್ಷ ಸಂಜಯ್ ನಾಯ್ಕ, ಮಂಡಲ ಪ್ರಭಾರಿ ಉಮೇಶ ಭಾಗವತ, ಜಿಲ್ಲಾ ಕಾರ್ಯದರ್ಶಿ ನಿತ್ಯಾನಂದ ಗಾಂವಕರ ಹಾಗೂ ಆರತಿ ಗೌಡ, ರಾಜ್ಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ್, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ ನಾಯಕ, ಜಿಲ್ಲಾ ಪ್ರಮುಖ ಜಗದೀಶ ನಾಯಕ, ಭಾಸ್ಕರ ನಾರ್ವೆಕರ, ಗೋಪಾಲಕೃಷ್ಣ ವೈದ್ಯ, ಮಂಡಲ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್, ಅಗಸೂರು ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ. ಎನ್. ಭಟ್ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು, ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.