ಮುಂಡಗೋಡ: ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿದ ಆರೋಪದ ಮೇಲೆ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ದೇವರಾಜ ಶಿವಪೂರ ಎಂಬ ಆರೋಪಿಯು ಆ.23 ರಂದು ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಬೈಕ್ ಮೇಲೆ ಚಂದ್ರಗುತ್ತಿಗೆ ಕರೆದುಕೊಂಡು ಹೋಗಿ ಅಲ್ಲಿಂದ ಮರಳಿ ಬರುವಾಗ ಬನವಾಸಿ ಹತ್ತಿರ ರಸ್ತೆ ಪಕ್ಕದ ಕಾಡಿನಲ್ಲಿ ಕರೆದುಕೊಂಡು ಹೋಗಿ ಬಲವಂತಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಈ ವಿಷಯವನ್ನು ಹೇಳಿದರೆ ಬಾಲಕಿಯನ್ನು ಮತ್ತು ಆಕೆಯ ತಮ್ಮನನ್ನು ಸಾಯಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾನೆಂದು ಅಪ್ರಾಪ್ತೆಯ ತಾಯಿ ಪೊಲೀಸ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪಿ.ಎಸ್.ಐ. ಬಸವರಾಜ ಮಬನೂರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಆರೋಪಿಯು ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.