ಮುಂಡಗೋಡ: ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೂ ಹೋಗದೆ, ವಾಪಸ್ ಮನೆಗೂ ಬಾರದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಆಕೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾಲೂಕಿನ ಹುಲಿಹೋಂಡಗ್ರಾಮದ ಸವಿತಾ ಹನುಮಂತ ನೀಲಿ (19) ಎಂಬುವವಳೇ ನಾಪತ್ತೆಯಾದ ವಿದ್ಯಾರ್ಥಿನಿಯಾಗಿದ್ದು. ನ. 23ರಂದು ಬೆಳಗ್ಗೆ ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಹೋದವಳು ಕಾಲೇಜಿಗೂಹೋಗದೆ, ಮರಳಿ ಮನೆಗೂ ಬಾರದೆ ನಾಪತ್ತೆಯಾಗಿದ್ದು, ತನ್ನ ಮಗಳನ್ನು ಹುಡುಕಿಕೊಡುವಂತೆ ವಿದ್ಯಾರ್ಥಿನಿ ತಾಯಿ ಶಶಿಕಲಾ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಮುಂಡಗೋಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.