Slide
Slide
Slide
previous arrow
next arrow

ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್ ನಾರಾಯಣಾಚಾರ್ಯ ಇನ್ನಿಲ್ಲ

300x250 AD

ಬೆಂಗಳೂರು: ಹಿರಿಯ ವಿದ್ವಾಂಸರು ಹಾಗೂ ಅನೇಕ ಪೌರಾಣಿಕ ಕಾದಂಬರಿಗಳ ರಚನಾಕಾರರಾಗಿದ್ದ ಪ್ರೊ.ಕೆ.ಎಸ್. ನಾರಾಯಣಾಚಾರ್ಯರು (88) ಶುಕ್ರವಾರ ನಿಧನರಾಗಿದ್ದಾರೆ.

ಇವರು ಕನ್ನಡದ ಭಾರತೀಯ ಸಂಸ್ಕೃತಿಯ ಲೇಖಕರು, ಪ್ರಚಾರಕರು ಮತ್ತು ಪ್ರವಚನಕಾರರು. ಇವರು 1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು. ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್, ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್ ಮಾಡಿ, ಆಧುನಿಕ ಇಂಗ್ಲಿಷ್
ಆನರ್ಸ್ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು.

300x250 AD

ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ಮಹಾಭಾರತ, ಭಾಗವತಗಳಲ್ಲಿ ವಿಶೇಷ ಪರಿಣಿತಿ ಪಡೆದಿದ್ದು, ಬೇಂದ್ರೆ ಮತ್ತು ಕೌಟಿಲ್ಯನ ಅರ್ಥಶಾಸ್ತ್ರದ ಬಗ್ಗೆ ಕೃತಿ ರಚಿಸಿದ್ದಾರೆ. ಸಂಸ್ಕೃತ, ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರಿಣಿತರು. ಸುಮಾರು 180ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿದ್ದು, ಸುಮಾರು 200ಕ್ಕೂ ಅಧಿಕ ಉಪನ್ಯಾಸಗಳನ್ನು ನೀಡಿದ್ದಾರೆ. ವೇದ ಸಂಸ್ಕೃತಿಯ ಪರಿಚಯ(10 ಸಂಪುಟ), ಶ್ರೀ ರಾಮಾವತಾರ ಸಂಪೂರ್ಣವಾದಾಗ,ಶ್ರೀ ರಾಮಾಯಣ ಪಾತ್ರ ಪ್ರಪಂಚ, ಶ್ರೀ ಮಹಾಭಾರತ ಪಾತ್ರ ಪ್ರಪಂಚ, ಆ ಹದಿನೆಂಟು ದಿನಗಳು, ರಾಜಸೂಯದ ರಾಜಕೀಯ, ರಾಜಸೂಯ ತಂದ ಅನರ್ಥ, ಶ್ರೀ ಕೃಷ್ಣಾವತಾರ (2 ಸಂ.), ಅಗಸ್ಯ, ದಶಾವತಾರ, ಮಹಾಮಾತೆ ಕುಮ್ಮಿ ಕಂದೆರೆದಾಗ, ನಳ ದಮಯಂತಿ, ಆಚಾರ್ಯ ಚಾಣಕ್ಯ, ರಾಮಾಯಣ ಸಂಪೂರ್ಣವಾದಾಗ, ಶ್ರೀ ರಾಮಾಯಣಸಾಹಸೀ (5ಭಾಗ), ಶ್ರೀ ರಾಮಾಯಣದ ಮಹಾ ಪ್ರಸಂಗಗಳು, ಶ್ರೀ ಕೃಷ್ಣ ಮತ್ತು ಮಹಾಭಾರತ ಯುದ್ಧ ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

Share This
300x250 AD
300x250 AD
300x250 AD
Back to top