ಶಿರಸಿ: ನಗರದ ಎಂ.ಇ.ಎಸ್.ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಟಿ.ಎಸ್‍ಹಳೆಮನೆ ಅವರು ಸಂವಿಧಾನದ ಮಹತ್ವವನ್ನು ಹಾಗೂ ಶ್ರೇಷ್ಠತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆಯನ್ನು ತಂದು ಕೊಟ್ಟರು.