• Slide
  Slide
  Slide
  previous arrow
  next arrow
 • ಬಿಎ, ಬಿಎಸ್ಸಿ ಫಲಿತಾಂಶ ಪ್ರಕಟ; ಎಂ.ಎಂ ಕಾಲೇಜು ವಿದ್ಯಾರ್ಥಿಗಳ ಸಾಧನೆ

  300x250 AD

  ಶಿರಸಿ: ಕರ್ನಾಟಕ ವಿಶ್ವವಿದ್ಯಾಲಯ ನಡೆಸಿದ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಎಂಇಎಸ್ ನ ಎಂ.ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉನ್ನತ ಅಂಕಗಳಿಸಿ ಸಾಧನೆ ಮಾಡಿದ್ದಾರೆ.


  ಬಿ.ಎ ಪದವಿಯಲ್ಲಿ 95 ಪ್ರತಿಶತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ವಾಘ್ದೇವಿ ಶೆಟ್ಟಿ, ವಿಭಶ್ರೀ ಹೆಗಡೆ 84.32% (2361/2800) ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದರೆ, ರಷ್ಮಿ ಗೌಡ, ಸಚಿನ್ ಎ ಎಮ್ 83.96% (2351/2800) ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದರು, ರಂಜನಾ ಭಟ್ 82.57% (2312/2800) ಅಂಕ ಗಳಿಸಿ ತೃತೀಯ ಸ್ಥಾನ ಗಳಿಸಿದರು.

  300x250 AD


  ಬಿಎಸ್ಸಿ ಪದವಿ ಯಲ್ಲಿ 65 ಪ್ರತಿಶತ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಅಶ್ವಿನಿ ಭಜಂತ್ರಿ 91.52% (3295/3600) ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದರೆ, ನೀತಾ ಹೆಗಡೆ 91.33% (3288/3600) ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದರು, ರಮ್ಯಾ ನಾಯಕ 90.88% ( 3272) ಅಂಕ ಗಳಿಸಿ ತೃತೀಯ ಸ್ಥಾನ ಗಳಿಸಿದರು. ವಿದ್ಯಾರ್ಥಿಗಳ ಈ ಸಾಧನೆಗೆ ಎಂಇಎಸ್ ನ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಾಚಾರ್ಯರು, ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

  Share This
  300x250 AD
  300x250 AD
  300x250 AD
  Leaderboard Ad
  Back to top