• Slide
    Slide
    Slide
    previous arrow
    next arrow
  • ಶಿಕ್ಷಣ ಇಲಾಖೆ ನಿರ್ಧಾರ; SSLC ಯ ಶೇ.20 ರಷ್ಟು ಪಠ್ಯ ಕಡಿತ

    300x250 AD

    ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪಠ್ಯವನ್ನು ಶೇಕಡಾ.20 ರಷ್ಟು ಕಡಿತ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ನಿರ್ಧಾರ ವಿದ್ಯಾರ್ಥಿಗಳಿಗೆ ಕೊಂಚ ನಿರಾಳತೆಯನ್ನು ಒದಗಿಸಿದೆ.

    ಕೊರೋನಾ ಸಾಂಕ್ರಾಮಿಕದ ಕಾರಣದಿಂದಾಗಿ ತರಗತಿಗಳು ತಡವಾಗಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆಯು ಪಠ್ಯವನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಂಡಿದೆ. ಈ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.80ರಷ್ಟು ಪಠ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಮಾತ್ರ ಪ್ರಶ್ನೆ ಪತ್ರಿಕೆ ಒಳಗೊಳ್ಳಲಿದೆ.

    300x250 AD

    ಎಲ್ಲಾ ಶೈಕ್ಷಣಿಕ ವರ್ಷಗಳಲ್ಲಿ ವಿದ್ಯಾರ್ಥಿಗಳಿಗೆ 240ಕ್ಕಿಂತಲೂ ಅಧಿಕ ಬೋಧನ ದಿನಗಳು ಸಿಗುತ್ತಿದ್ದವು, ಆದರೆ ಈ ಬಾರಿ ಕೇವಲ 140 ದಿನಗಳು ಇರುತ್ತವೆ. ಹೀಗಾಗಿ ಪಠ್ಯ ಕಡಿತದ ನಿರ್ಧಾರವನ್ನು ಶಿಕ್ಷಣ ಸಚಿವ ಬಿಸಿ ನಾಗೇಶ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

    ವಿದ್ಯಾರ್ಥಿಗಳು ಮತ್ತು ಪೋಷಕರ ಅಭಿಪ್ರಾಯವನ್ನು ಸಂಗ್ರಹಿಸಿದ ನಂತರವೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರವು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಒತ್ತಡವನ್ನು ನಿವಾರಿಸಲಿದೆ. ಪಠ್ಯಕ್ಕೆ ಸಂಬಂಧಿಸಿದ ಗೊಂದಲವನ್ನೂ ನಿವಾರಿಸಲಿದೆ.
    ನ್ಯೂಸ್ 13

    Share This
    300x250 AD
    300x250 AD
    300x250 AD
    Leaderboard Ad
    Back to top