• first
    second
    third
    previous arrow
    next arrow
  • ಹವಾಮಾನ ಇಲಾಖೆ ಮುನ್ಸೂಚನೆ; ನ.30 ರವರೆಗೆ ರಾಜ್ಯದಲ್ಲಿ ಮಳೆ ಸಾಧ್ಯತೆ

    300x250 AD

    ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಬುಧವಾರದವರೆಗೂ ಮಳೆ ಜೋರಾಗಿರಲಿದೆ. ಅಂದರೆ ರಾಜ್ಯದಲ್ಲಿ ನ.30 ರವರೆಗೆ ಭಾರೀ ಮಳೆಯಾಗಿವ ಸಾಧ್ಯತೆಯಿದ್ದು, ರಾಜ್ಯದ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ 30ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆಂಧ್ರಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಅಬ್ಬರಿಸಲಿದೆ.

    300x250 AD

    ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಈಶಾನ್ಯ ಮಾರುತಗಳು ಅಪ್ಪಳಿಸಲಿವೆ. ಮುಂದಿನ 4 ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‍ನಲ್ಲಿ ಇಂದು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ.

    ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‍ಎನ್‍ಡಿಎಂಸಿ) ತಿಳಿಸಿದೆ. ಮತ್ತೊಂದೆಡೆ, ಇಡೀ ಸಮಯದಲ್ಲಿ ಈಶಾನ್ಯ ಮಾರುತವೂ ಬೀಸುತ್ತಿದೆ. ಈ ಕಾರಣದಿಂದಾಗಿ ಈ ರಾಜ್ಯಗಳಲ್ಲಿ ಮಳೆಯಾಗಲಿದೆ. ಇದಲ್ಲದೆ, ನವೆಂಬರ್ 29 ರಂದು ಅರಬ್ಬಿ ಸಮುದ್ರದಲ್ಲಿಯೂ ಚಂಡಮಾರುತ ಏಳುವ ಸಂಭವ ಇದೆ ಎಂದು ತಿಳಿಸಿದೆ.

    Share This
    300x250 AD
    300x250 AD
    300x250 AD
    Back to top