ಅಂಕೋಲಾ: ರೈತರ ಮತ್ತು ಕಾರ್ಮಿಕರ ಪ್ರಮುಖ ಬೇಡಿಕೆಗಳಾದ ಕನಿಷ್ಠ ಬೆಂಬಲ ಬೆಲೆ ಖಾತರಿ ಮಾಡುವ ಕಾನೂನು ಹಾಗು ವಿದ್ಯುತ್ ಮಸೂದೆ-2020ನ್ನು ಸೇರಿ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಸಹ ಕೂಡಲೇ ಇತ್ಯರ್ಥ ಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಿಐಟಿಯು ವತಿಯಿಂದ ತಹಸೀಲ್ದಾರರ ಮೂಲಕ ಪ್ರಧಾನ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರಧಾನಿ ಮೋದಿಯವರು, ಕರಾಳ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವುದಾಗಿ ಘೋಷಿಸಿ, ಈ ಹೋರಾಟದ ಮತ್ತೆರಡು ಬೇಡಿಕೆಗಳಾದ ಕನಿಷ್ಠ ಬೆಂಬಲ ಬೆಲೆ ಕಾನೂನು ಪ್ರಶ್ನೆ, ವಿದ್ಯುತ್ ಮಸೂದೆ ವಾಪಸಾತಿಯ ಬಗ್ಗೆ ಖಚಿತ ನಿಲುವನ್ನು ಪ್ರಕಟಿಸಿಲ್ಲ. ಈ ನೀತಿಗಳನ್ನು ವಿರೋಧಿಸಿ ನವೆಂಬರ್ 26, 2021ಕ್ಕೆ ರಾಜ್ಯಾದ್ಯಂತ ಚಳುವಳಿಯನ್ನು ಸಂಘಟಿಸಲಾಗಿದೆ.
ಕರಾಳ ಮೂರು ಕೃಷಿ ಕಾಯ್ದೆಗಳ ರದ್ದತಿಯ ಘೋಷಣೆ, ಕಾಪೆರ್Çರೇಟ್ ಕಂಪನಿಗಳ ವಿರೋಧಿ ಐಕ್ಯ ರೈತ ಚಳುವಳಿಗೆ ಸಿಕ್ಕಿದ ವಿಜಯ, ಕನಿಷ್ಠ ಬೆಂಬಲ ಬೆಲೆ ಕಾನೂನು ರಚನೆ ಹಾಗು ವಿದ್ಯುತ್ ಮಸೂದೆ-2020 ರ ವಾಪಸ್ ಖಚಿತವೆಂಬ ವಿಶ್ವಾಸದೊಂದಿಗೆ ಹೋರಾಟಕ್ಕೆ ನಿರ್ಧಾರ, ಕಾರ್ಮಿಕ ಸಂಹಿತೆಗಳ ರದ್ಧತಿ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ತಡೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಿಯಂತ್ರಣ ಹಾಗೂ ರಾಜ್ಯ ಸರ್ಕಾರ ಕೂಡಲೇ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಗೋಹತ್ಯೆ ನಿಷೇದ ಕಾಯ್ದೆ ತಿದ್ದುಪಡಿಗಳನ್ನು ವಾಪಸ್ಸು ಪಡೆಯಬೇಕು, ಬೆಳೆ ನಷ್ಠ ಪರಿಹಾರ ನೀಡಿಕೆ, ರೈತರ ಹಾಲಿನ ದರ ಏರಿಕೆಗೆ ಮುಂದಾಗಬೇಕು, ಕರಾಳ ಮೂರು ಕೃಷಿ ಕಾಯ್ದೆಗಳ ರದ್ದತಿಯ ಕುರಿತು ಪ್ರಧಾನಿ ಮೋದಿಯವರ ಘೋಷಣೆ, ಕಾಪೆರ್Çರೇಟ್ ವಿರೋಧಿ ಐಕ್ಯ ರೈತರ ಚಳುವಳಿಗೆ ಸಿಕ್ಕಿದ ವಿಜಯವಾಗಿದೆ.
ಕೇಂದ್ರ ಸರ್ಕಾರ ತಂದ ಕರಾಳ ಮೂರು ಕೃಷಿ ಕಾಯ್ದೆಗಳಿಗೆ ನ್ಯಾಯಾಲಯ ಮತ್ತು ರೈತ ಆಂದೋಲನ ತಡೆ ನೀಡಿದರೂ ರಾಜ್ಯ ಸರ್ಕಾರ, ಕರಾಳ ಕೃಷಿ ಕಾಯ್ದೆಗಳ ಜಾರಿಯ ಭಾಗವಾಗಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಗೋಹತ್ಯೆ ನಿಷೇದ ಕಾಯ್ದೆಗಳಿಗೆ ತಿದ್ದುಪಡಿಗಳನ್ನು ತಂದು ಬಾರಿ ವೇಗವಾಗಿ ಜಾರಿ ಮಾಡುತ್ತಿದೆ. ಕನಿಷ್ಠ ಚರ್ಚೆ ಇಲ್ಲದೆ ಹೊಸ ಶಿಕ್ಷಣ ನೀತಿಯನ್ನು ತರಾತುರಿಯಾಗಿ ಜಾರಿ ಮಾಡಲಾಗುತ್ತಿದೆ. ಅಲ್ಲದೆ ವಿಪರೀತ ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಸರ್ಕಾರ, ಕಳೆದ ಒಂದೂವರೆ ತಿಂಗಳ ಸತತ ಮಳೆಯಿಂದ ಸಾವಿರಾರು ಕೋಟಿ ರೂ.ಗಳ ಬೆಳೆ ನಷ್ಟವಾದರೂ ತಲೆ ಕೆಡಿಸಿಕೊಳ್ಳುತ್ತಿಲ್ಲ.
ರಾಜ್ಯ ಸರ್ಕಾರಕ್ಕೆ ಸಂಯುಕ್ತ ಹೋರಾಟ-ಕರ್ನಾಟಕದ ಗಡುವು :
ಪ್ರಧಾನಿ ಮೋದಿ ಘೋಷಣೆ ಮಾಡಿದಂತೆ, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಕೂಡಲೇ ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಗೋಹತ್ಯೆ ನಿಷೇದ ಕಾಯ್ದೆಗಳ ತಿದ್ದುಪಡಿಗಳನ್ನು ರದ್ದು ಮಾಡಬೇಕು. ಇಲ್ಲದಿದ್ದರೆ ನಿರಂತರ ಹೋರಾಟಕ್ಕೆ ಇಳಿಯಲಾಗುವುದು. ಬೆಳೆ ನಷ್ಟ ಪರಿಹಾರ ನೀಡಿಕೆ, ಹಾಲಿನ ಬೆಲೆ ಇಳಿಕೆ ಇತ್ಯಾದಿ ಅಂಶಗಳ ಕುರಿತು ಚರ್ಚಿಸಲು ಕೂಡಲೇ ರೈತ ಸಂಘಟನೆಗಳ ಸಭೆಯೊಂದನ್ನು ಕರೆಯಬೇಕೆಂದು ಸಂಯುಕ್ತ ಹೋರಾಟ-ಕರ್ನಾಟಕ ಪರವಾಗಿ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಅಂಕೋಲಾ ಸಮಿತಿಗಳು ರಾಜ್ಯದ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗಿದೆ.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ, ತಾಲೂಕು ಅಧ್ಯಕ್ಷ ಗೌರೀಶ ನಾಯಕ, ಕಾರ್ಯದರ್ಶಿ ಸಂತೋಷ ನಾಯ್ಕ, ಸಿಐಟಿಯು ತಾಲೂಕು ಸಂಚಾಲಕ ಎಚ್.ಬಿ.ನಾಯಕ ಮುಂತಾದವರು ಪಾಲ್ಗೊಂಡಿದ್ದರು. ತಹಸೀಲ್ದಾರ ಉದಯ ಕುಂಬಾರ ಮನವಿ ಸ್ವೀಕರಿಸಿದರು.