ಕಾರವಾರ: 8 ವರ್ಷದ ಬಾಲಕಿ ಮೇಲೆ ಮಂಗಳೂರಿನಲ್ಲಿ ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ. ಇಂತಹ ಅಮಾನುಶ ಕೃತ್ಯ ನಡೆಯಬಾರದು. ಇಂಥಹ ಕೆಲಸ ಮಾಡಿದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಶಾಸಕಿ ರೂಪಾಲಿ ನಾಯ್ಕ ಒತ್ತಾಯಿಸಿದ್ದಾರೆ.
ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ, ಅತ್ಯಾಚಾರಗಳನ್ನು ಒಬ್ಬ ಮಹಿಳಾ ಜನಪ್ರತಿನಿಧಿಯಾದ ತಮ್ಮಿಂದ ಸಹಿಸಲು ಸಾಧ್ಯವಿಲ್ಲ. ಘಟನೆ ನಡೆದ ಮೂರು ದಿನಗಳಲ್ಲಿ ಬಾಲಕಿಯ ಮೇಲೆ ಅತ್ಯಾಚಾರ, ಹತ್ಯೆ ನಡೆಸಿದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು ಶ್ಲಾಘನೀಯ. ಇದರ ಜತೆಗೆ ಆರೋಪಿಗಳನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಆ ಮೂಲಕ ಇಂತಹ ಘಟನೆಗಳು ನಡೆಯದಂತೆ ಒಂದು ಬಲವಾದ ಸಂದೇಶ ಕೊಡುವಂತಾಗಬೇಕು ಎಂದು ರೂಪಾಲಿ ನಾಯ್ಕ ತಿಳಿಸಿದ್ದಾರೆ.