• Slide
    Slide
    Slide
    previous arrow
    next arrow
  • ಹೊನ್ನಾವರದಲ್ಲಿ ಡಿ.3ಕ್ಕೆ ರಾಜ್ಯಮಟ್ಟದ ವಿಚಾರ ಸಂಕಿರಣ

    300x250 AD

    ಹೊನ್ನಾವರ: ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯ ಹೊನ್ನಾವರದ ಕನ್ನಡ ಸಂಘ ಮತ್ತು ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ (ರಿ) ಬೆಂಗಳೂರು ಮತ್ತು ಅಭಿನವ ಬೆಂಗಳೂರು ಇವರ ಸಹಯೋಗದಲ್ಲಿ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಮಾರ್ಗದರ್ಶನದಲ್ಲಿ ಭಾಷಾ ಬೋಧನೆಯ ಬಹುಮುಖಿ ನೆಲೆಗಳು ಎಂಬ ವಿಷಯವನ್ನು ಆಧರಿಸಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವು ಡಿ.3 ರಂದು ಹೊನ್ನಾವರದ ಆರ್.ಎಸ್.ಹೆಗಡೆ ಸಭಾಭವನದಲ್ಲಿ ನಡೆಯಲಿದೆ.

    ಅಂದು ಪೂರ್ವಾಹ್ನ 9 ಗಂಟೆಗೆ ಜವಾಹರಲಾಲ್ ವಿ.ವಿ. ನವದೆಹಲಿಯ ವಿಶ್ರಾಂತ ಪ್ರಾಧ್ಯಾಪಕರು, ಕವಿಗಳೂ ಆಗಿರುವ ಎಚ್.ಎಸ್.ಶಿವಪ್ರಕಾಶ್ ವಿಚಾರ ಸಂಕಿರಣವನ್ನು ಉದ್ಘಾಟಿಸುವರು. ಎಂ.ಪಿ.ಇ. ಸೊಸೈಟಿಯ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ, ಶಿವಾನಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅಭಿನವದ ರವಿಕುಮಾರ್ ದಿಕ್ಸೂಚಿ ಮಾತುಗಳನ್ನಾಡಲಿರುವರು. ಕಾಲೇಜಿನ ಪ್ರಾಚಾರ್ಯ ಡಾ. ವಿಜಯಲಕ್ಷ್ಮಿ ಎಂ. ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

    300x250 AD

    ನಂತರ ನಡೆಯುವ ವಿವಿಧ ಗೋಷ್ಠಿಗಳಲ್ಲಿ ಡಾ. ರಾಜೇಂದ್ರ ಚೆನ್ನಿ, ಡಾ. ವೆಂಕಟಗಿರಿ ದಳವಾಯಿ, ದೇವೇಂದ್ರ ಬೆಳೆಯೂರು, ಡಾ. ಶ್ರೀಧರ ಬಳಗಾರ, ವಿದ್ವಾನ್ ಉಮಾಕಾಂತ ಭಟ್ಟ ಕೆರೆಕೈ, ಡಾ. ಸಂಧ್ಯಾ ಹೆಗಡೆ, ದೊಡ್ಡಹೊಂಡ ಮೊದಲಾದ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯಗಳ ಕುರಿತು ವಿಚಾರ ಮಂಡನೆ ಮಾಡಲಿರುವರು. ಅದೇ ದಿನ ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಭಾಷಾವಿಜ್ಞಾನಿಗಳಾದ ಡಾ. ಕೃಷ್ಣ ಪರಮೇಶ್ವರ ಭಟ್ಟ ಸಮಾರೋಪ ನುಡಿಗಳನ್ನಾಡುವರು. ಅನಿಲ ಗೋಕಾಕ್, ಡಾ. ಎನ್.ಆರ್.ನಾಯಕ ಮೊದಲಾದ ಗಣ್ಯರು ಪಾಲ್ಗೊಳ್ಳಲಿರುವರು.

    ಈ ವಿಚಾರ ಸಂಕಿರಣಕ್ಕೆ ವಿವಿಧ ಮಹಾವಿದ್ಯಾಲಯಗಳ ಕನ್ನಡ ಭಾಷಾ ಬೋಧಕರು, ಸಾಹಿತ್ಯಾಸಕ್ತರು ಪಾಲ್ಗೊಳ್ಳುವಂತೆ ಕನ್ನಡ ವಿಭಾಗದ ಮುಖ್ಯಸ್ಥ ಪೆÇ್ರ. ನಾಗರಾಜ ಹೆಗಡೆ ಅಪಗಾಲ ಮತ್ತು ವಿ. ಕೃ ಗೋಕಾಕ್ ಟ್ರಸ್ಟ್ (ರಿ) ಬೆಂಗಳೂರು ಇದರ ಅಧ್ಯಕ್ಷ ಡಾ.ಬಿ.ಎಸ್. ವಿಶ್ವನಾಥ್ ಪ್ರಕಟಣೆಯಲ್ಲಿ ಕೋರಿದ್ದಾರೆ. ಕ.ವಿ.ವಿ. ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕರಿಗೆ ಕಾಲೇಜು ಶಿಕ್ಷಣ ಇಲಾಖೆಯು ಒಂದು ದಿನದ ಅನ್ಯಕಾರ್ಯ ನಿಮಿತ್ತ ಮಂಜೂರು ಮಾಡಿರುತ್ತದೆ.

    Share This
    300x250 AD
    300x250 AD
    300x250 AD
    Leaderboard Ad
    Back to top