ಮುಂಡಗೋಡ: ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿರುವ ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ ಮೂರ್ತಿಗೆ ದಲಿತ ಮುಖಂಡರು ಹಾಗೂ ಸಾರ್ವಜನಿಕರು ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂವಿಧಾನ ಅರ್ಪಣಾ ದಿನವನ್ನು ಆಚರಿಸಿದರು.
ಪಟ್ಟಣ ಪಂಚಾಯತ ಸದಸ್ಯ ಅಶೋಕ ಚಲವಾದಿ ಮಾತನಾಡಿ, ಭಾರತ ಸಂವಿಧಾನವು ರಾಷ್ಟ್ರಕ್ಕೆ ಮಾರ್ಗದರ್ಶಿ ಪುಸ್ತಕವಾಗಿದೆ. ನಮ್ಮ ಸಂವಿಧಾನವು ಮೂಲಭೂತ ಹಕ್ಕುಗಳು, ಕರ್ತವ್ಯಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಚನೆಯ ಆಧಾರವಾಗಿದೆ. ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26 ರಂದು ಭಾರತದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ‘ಸಂವಿಧಾನ ದಿವಸ್’ ಎಂದೂ ಕರೆಯಲಾಗುತ್ತದೆ. ಬೃಹತ್ ಸಂವಿಧಾನವು ಜನೆವರಿ 26 1950 ರಂದು ಇದನ್ನು ಜಾರಿಗೆ ತರಲಾಯಿತು. ಆ ದಿನವನ್ನು ಗಣರಾಜ್ಯ ದಿನ ಎಂದು ಘೋಷಿಸಲಾಗಿದೆ. ಭಾರತೀಯ ಸಂವಿಧಾನವನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತದ ಮೊದಲ ಕಾನೂನು ಸಚಿವ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಈ ದಿನ ಗೌರವ ಸಲ್ಲಿಸಲಾಗುತ್ತದೆ ಎಂದರು.
ಬೌದ್ಧ ಧರ್ಮ ಲಾಮಾ ಪರಮೇಶ, ಪ್ರಕಾಶ, ನಿಂಗಪ್ಪ, ರಾಜು, ವಿರೂಪಾಕ್ಷಪ್ಪ, ಉಮೇಶ, ಡಾ.ವೀರಭದ್ರ ಕಾಳೆ, ರವಿ ಹಾವೇರಿ, ಮೈಲಾರಿ ಗುಡಗೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.