• first
    second
    third
    previous arrow
    next arrow
  • ಉತ್ತರ ಕಾಶ್ಮೀರದಲ್ಲಿ ಎನ್‌ಕೌಂಟರ್; ಲಷ್ಕರ್ ಕಮಾಂಡರ್ ಸೇರಿ ಇಬ್ಬರ ಹತ್ಯೆ

    300x250 AD

    ಶ್ರೀನಗರ: ಉತ್ತರ ಕಾಶ್ಮೀರದ ಸೊಪೋರ್ ಗ್ರಾಮದಲ್ಲಿ ಭಾನುವಾರ ಸಂಜೆ ಆರಂಭಗೊಂಡ ಎನ್‌ಕೌಂಟರ್‌ನಲ್ಲಿ ಕುಖ್ಯಾತ, ಮೋಸ್ಟ್ ವಾಟೆಂಡ್ ಲಷ್ಕರ್ ಕಮಾಂಡರ್ ಮುದಾಸೀರ್ ಪಂಡಿತ್ ಮತ್ತು ಇನ್ನಿಬ್ಬರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ.
    ಉಗ್ರರು ಇರುವ ಖಚಿತ ಮಾಹಿತಿಯ ಆಧಾರದ ಮೇರೆಗೆ ತಂತ್ರಾಯಪೋರ ಬ್ರಾತ್ ಗ್ರಾಮದಲ್ಲಿ ಎನ್‌ಕೌಂಟರ್ ಅನ್ನು ಆರಂಭಿಸಲಾಯಿತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
    ಭಯೋತ್ಪಾದನೆಗೆ ಸಂಬಂಧಿಸಿದ ಹಲವಾರು ಅಪರಾಧಗಳು ಮಾತ್ರವಲ್ಲದೇ, ಇತ್ತೀಚೆಗೆ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್‌ಗಳು ಮತ್ತು ಇಬ್ಬರು ನಾಗರಿಕರ ಹತ್ಯೆಯಲ್ಲಿ ಪಂಡಿತ್ ಭಾಗಿಯಾಗಿದ್ದಾನೆ ಎಂದು ಕಾಶ್ಮೀರದ ಪೊಲೀಸ್ ಮುಖ್ಯಸ್ಥ (ಐಜಿ) ವಿಜಯ್ ಕುಮಾರ್ ತಿಳಿಸಿದ್ದಾರೆ.
    ಜೂನ್ 12 ರಂದು ಸೊಪೋರ್‌ನಲ್ಲಿ ಪೊಲೀಸರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಉಗ್ರರ ವಿರುದ್ಧ ಜಂಟಿ ಕಾರ್ಯಾಚರಣೆಗಳನ್ನು ನಡೆಸುತ್ತಾ ಬಂದಿವೆ. ಜೂನ್ 12 ರಂದು ನಡೆದ ದಾಳಿಯಲ್ಲಿ ಇಬ್ಬರು ಪೊಲೀಸರು ಮತ್ತು ಇಬ್ಬರು ನಾಗರಿಕರು ಸಾವಿಗೀಡಾಗಿದ್ದರು.
    ಈ ದಾಳಿಗೆ ಲಷ್ಕರ್-ಎ-ತೋಯ್ಬಾ ಉಗ್ರರು ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ, ಘಟನೆ ನಂತರ ಐಜಿ ವಿಜಯ್ ಕುಮಾರ್ ಅವರು ಸೊಪೋರ್‌ನಲ್ಲಿ ಹಿರಿಯ ಸೇನೆ ಮತ್ತು ಸಿಆರ್‌ಪಿಎಫ್ ಅಧಿಕಾರಿಗಳನ್ನು ಭೇಟಿಯಾಗಿ ಜಂಟಿ ಕಾರ್ಯಾಚರಣೆ ನಡೆಸುವ ಬಗ್ಗೆ ಮಾತುಕತೆ ನಡೆಸಿದರು. ಜೂನ್ 12 ರಂದು ಪೊಲೀಸರ ಮೇಲಿನ ದಾಳಿಯಲ್ಲಿ ಭಾಗಿಯಾದ ಇಬ್ಬರು ಸ್ಥಳೀಯ ಭಯೋತ್ಪಾದಕರಲ್ಲಿ ಮುದಾಸೀರ್ ಪಂಡಿತ್ ಒಬ್ಬ ಎಂದು ತಿಳಿದು ಬಂದಿತ್ತು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top