ಹೊನ್ನಾವರ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ತಾಲೂಕಿನ ಕರ್ಕಿಯ ಹಿರಿಯ ಪ್ರಾಥಮಿಕ ಶಾಲೆಯ ಬಳಿ ನಡೆದಿದೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷತನದಿಂದ ಲಾರಿ ಚಲಾಯಿಸಿಕೊಂಡು ಬಂದು ಚಾಲಕ ಹಳದೀಪುರದಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಕರ್ಕಿ ಹೆಗಡೆ ಹಿಲ್ಲದ ನಿವಾಸಿ ಭರತ್ ವಿಶ್ವನಾಥ ನಾಯ್ಕ(27) ಈತನಿಗೆ ಗಂಭೀರ ಗಾಯವಾಗಿದೆ. ಈತನ ತಲೆ, ಹಾಗೂ ಕೈ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೊರ ಜಿಲ್ಲೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.