• Slide
    Slide
    Slide
    previous arrow
    next arrow
  • ರಾಜಾಜಿ ನಗರ ಇಎಸ್‍ಐ ಕರ್ಮಕಾಂಡ; ಶೀಘ್ರವೇ ತನಿಖೆ ಆರಂಭ; ಸಚಿವ ಹೆಬ್ಬಾರ್

    300x250 AD

    ಬೆಂಗಳೂರಿನ ಇಎಸ್‍ಐ ಆಸ್ಪತ್ರೆಯಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದು, ಈ ಆಸ್ಪತ್ರೆ ನನ್ನ ವ್ಯಾಪ್ತಿಗೆ ಬರುವುದಿಲ್ಲ. ಕೇಂದ್ರ ಸರ್ಕಾರದ ಅಧೀನಕ್ಕೆ ಬರುತ್ತದೆ. ಆದರೂ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.


    ಬೆಂಗಳೂರಿನ ರಾಜಾಜಿ ನಗರದಲ್ಲಿರುವ ಕಾರ್ಮಿಕ ವಿಮಾ ಆಸ್ಪತ್ರೆಯ (ಇಎಸ್‍ಐ) ಶೈತ್ಯಾಗಾರದಲ್ಲಿ 15 ತಿಂಗಳುಗಳವರೆಗೆ ಎರಡು ಮೃತದೇಹಗಳನ್ನು ಹಾಗೆಯೇ ಇಟ್ಟು, ನಾಲ್ಕು ದಿನಗಳ ಹಿಂದೆ ಆ ಶವಗಳನ್ನು ಹೊರ ತೆಗೆದಿರುವ ಘಟನೆ ನಡೆದಿದೆ. ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಅಸಮಾಧಾನ ಹೊರ ಹಾಕಿದ್ದು, ಮೃತರ ಕುಟುಂಬದವರು ಕೂಡ ಶವಗಳನ್ನು ಸ್ವೀಕರಿಸಲು ಹಿಂದೇಟು ಹಾಕಿರುವ ಬಗ್ಗೆ ವರದಿಯಾಗಿದೆ.

    300x250 AD


    ಆದರೂ ಸರ್ಕಾರ ಜವಾಬ್ದಾರಿಯಿಂದ ಪಲಾಯನ ಮಾಡಲಾಗುವುದಿಲ್ಲ. ರಾಜ್ಯದಲ್ಲಿ ಇಂಥದ್ದೊಂದು ಘಟನೆ ನಡೆದಾಗ ಈಗಾಗಲೇ ನಿರ್ದೇಶಕರುಗಳಿಗೆ ಘಟನೆಗೆ ಸಂಬಂಧಿಸಿದಂತೆ ನಿರ್ದೇಶನ ನೀಡಲು ಸೂಚಿಸಿದ್ದೇನೆ. ಯಾವ ಕಾರಣಕ್ಕಾಗಿ ಘಟನೆ ನಡೆದಿದೆ? ಮೃತರು ಯಾರು? ಅವರು ಯಾವ ಕಾಯಿಲೆಯಿಂದ ಮೃತಪಟ್ಟಿದ್ದಾರೆ? ಎಂಬುದರ ಬಗ್ಗೆ ತನಿಖೆಯಾಗಬೇಕಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ನ್ಯಾಯಯುತವಾಗಿ ಕ್ರಮ ತೆಗೆದುಕೊಳ್ಳಲಿದೆ. ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದು, ತನಿಖೆ ಶೀಘ್ರವೇ ಆರಂಭವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದ್ದಾರೆ.


    ಪ್ರಕರಣಕ್ಕೆ ಕಾರಣವೇನು ಎಂಬುದು ಹಾಗೂ ತಪ್ಪಿತಸ್ಥರು ಯಾರು ಎಂಬ ಮಾಹಿತಿ ಅರಿಯುವ ಹಕ್ಕು ಈ ರಾಜ್ಯದ ಜನತೆಗಿದೆ. ಹೀಗಾಗಿ ನಿಶ್ಚಿತವಾಗಿ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top