ಯಲ್ಲಾಪುರ: ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಎಸ್ ಟಿ ಭಟ್‍ರವರು ಏಡ್ಸ್ ರೋಗದ ಹಿನ್ನೆಲೆ, ಏಡ್ಸ್ ರೋಗದ ಕಾರಣಗಳು ಹಾಗೂ ಏಡ್ಸ್ ರೋಗ ಬರದಂತೆ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ದಾಕ್ಷಾಯಣಿ ಜಿ ಹೆಗಡೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿ ಹೇಳಿದರು. ಕನ್ನಡ ಸಹಾಯಕ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ರಾಮಕೃಷ್ಣ ಗೌಡ ಸ್ವಾಗತಿಸಿದರು.
ಐಶ್ವರ್ಯ ಫಿರೋಜಿ ಹಾಗೂ ಸೌಂದರ್ಯ ಫಿರೋಜಿ ಬಿ.ಎಸ್ಸಿ ದ್ವಿತೀಯ ವರ್ಷ ಪ್ರಾರ್ಥಿಸಿದರು. ಸಂಧ್ಯಾ ಮರಾಠಿ ವಂದಿಸಿದರು. ಪೃಥ್ವಿ ಗಾಂವ್ಕರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಇತಿಹಾಸ ಸಹ ಪ್ರಾಧ್ಯಾಪಕರು ಹಾಗೂ ಐಕ್ಯೂಎಸಿ ಸಂಚಾಲಕ ಡಿ ಎಸ್ ಭಟ್ ತಾಲೂಕಾ ಆಸ್ಪತ್ರೆಯ ಸಿಬ್ಬಂದಿ ರಾಘವೇಂದ್ರ ನಾಯ್ಕ ಹಾಗೂ ಮಹಾಂತೇಶ ಎಸ್ ಉಪಸ್ಥಿತರಿದ್ದರು.