ಯಲ್ಲಾಪುರ: ತಾಲೂಕಿನ ಹುಲಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕ ವಸಂತ ಹರ್ಟೇಕರ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ತಾಲೂಕಾ ಶಿಕ್ಷಣಾಧಿಕಾರಿಗಳ ಕಛೇರಿಯ ಆವರಣದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ತಾಲೂಕಾ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಬಿಜೆಪಿ ಮಂಡಲ ಉಪಾಧ್ಯಕ್ಷ ಶಿರಿಷ್ ಪ್ರಭು, ಶಿಕ್ಷಕ ನಾರಾಯಣ ನಾಯಕ, ಪ್ರಕಾಶ್ ನಾಯಕ ಹಾಗೂ ತಾಲೂಕಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.