• first
    second
    third
    previous arrow
    next arrow
  • ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಡಿ.4ರವರೆಗೆ ಮಳೆ ಸಾಧ್ಯತೆ

    300x250 AD

    ಬೆಂಗಳೂರು: ರಾಜ್ಯದಲ್ಲಿ ಡಿ.2 ಗುರುವಾರದಿಂದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


    ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಡಿಸೆಂಬರ್ 4 ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಇಂದಿನಿಂದ ಡಿ. 4ರವರೆಗೂ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಸನ, ಕೊಡಗು, ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    300x250 AD


    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಗುಜರಾತ್ ಸೇರಿದಂತೆ 10 ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಶನಿವಾರ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    Share This
    300x250 AD
    300x250 AD
    300x250 AD
    Back to top