• first
    second
    third
    previous arrow
    next arrow
  • ಸಪ್ಟೆಂಬರ್ ತಿಂಗಳ ಹಾಲಿನ ಪ್ರೋತ್ಸಾಹಧನ ಜಮಾ; ಸುರೇಶ್ಚಂದ್ರ ಕೆಶಿನ್ಮನೆ

    300x250 AD


    ಶಿರಸಿ: ಸಪ್ಟೆಂಬರ್ 2021 ನೇ ಮಾಹೆಯ ರ ಸರ್ಕಾರದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ರೂ. 5 ಪ್ರೋತ್ಸಾಹಧನವು ಆಧಾರ ಜೋಡಣೆಯಾದ ಹಾಲು ಉತ್ಪಾದಕ ರೈತರ ಖಾತೆಗೆ ಡಿ.1 ಬುಧವಾರ ರಂದು ಜಮಾ ಆಗಿರುತ್ತದೆ ಎಂದು ಧಾರವಾಡ ಹಾಲು ಒಕ್ಕೂಟದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರು ಹಾಗೂ ಒಕ್ಕೂಟದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ತಿಳಿಸಿದ್ದಾರೆ.


    ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಕ್ಟೋಬರ್-2021 ರ ವರೆಗಿನ ಪ್ರೋತ್ಸಾಹ ಧನದ ಮಾಹಿತಿಯನ್ನು ನಮ್ಮಿಂದ ಈಗಾಗಲೇ ಕ್ಷೀರಸಿರಿ ತಂತ್ರಾಶದಲ್ಲಿ ಈಗಾಗಲೇ ಅಳವಡಿಸಲಾಗಿದ್ದು, ಮತ್ತು ನವೆಂಬರ್-2021 ನೇ ಮಾಹೆಯ ಮಾಹಿತಿಯನ್ನು ಕ್ಷೀರಸಿರಿ ತಂತ್ರಾಂಶದಲ್ಲಿ ಅಳವಡಿಸಲು ಸೂಕ್ತ ಮಾಹಿತಿಗಳನ್ನು ಪಡೆಯಲಾಗುತ್ತಿದೆ ಎಂದರು.

    300x250 AD

    ಸಪ್ಟೆಂಬರ್ 2021 ರ ವರೆಗೆ ಸರ್ಕಾರದಿಂದ ಅತ್ಯಂತ ತ್ವರಿತವಾಗಿ ಪ್ರೋತ್ಸಾಹಧನವನ್ನು ಹಾಲು ಉತ್ಪಾದಕ ರೈತರ ಖಾತೆಗೆ ಜಮಾ ಮಾಡಲಾಗಿದ್ದು, ಅಕ್ಟೋಬರ್-2021 ನೇ ಮಾಹೆಯ ಪ್ರೋತ್ಸಾಹಧನವು ಕೂಡ ಶೀಘ್ರದಲ್ಲೇ ರೈತರ ಖಾತೆಗೆ ಸರ್ಕಾರದಿಂದ ಜಮಾ ಆಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ಹಾಗೂ ಪ್ರೋತ್ಸಾಹಧನ ಜಮಾ ಆಗದ ರೈತರು ಆಯಾ ವ್ಯಾಪ್ತಿಯ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದರು.

    Share This
    300x250 AD
    300x250 AD
    300x250 AD
    Back to top