ಕಾರವಾರ: ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಪರವಾಗಿ ಕಾರವಾರ ತಾಲೂಕಿನ ಚೆಂಡಿಯಾ ಮಹಾಶಕ್ತಿ ಕೇಂದ್ರದ ಅಮದಳ್ಳಿ, ತೋಡುರು ಹಾಗೂ ಚೆಂಡಿಯಾ ಗ್ರಾಮ ಪಂಚಾಯತ್ ಸದಸ್ಯರಲ್ಲಿ ಶಾಸಕಿ ರೂಪಾಲಿ ನಾಯ್ಕ ಮತಯಾಚಿಸಿದರು.
ಅಭಿವೃದ್ಧಿಗೆ ಕೈ ಜೋಡಿಸಲು ಗ್ರಾಮ ಪಂಚಾಯತ್‍ನ ಎಲ್ಲ ಸದಸ್ಯರು ನಮ್ಮ ಅಭ್ಯರ್ಥಿಗೆ ಮೊದಲ ಪ್ರಾಶಸ್ಯದ ಮತ ನೀಡಿ ಬಲ ತುಂಬಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರ ಇರುವುದರಿಂದ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದರು.
ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಜನಪ್ರತಿನಿಧಿಗಳ ಸಮಸ್ಯೆಗಳ ಬಗ್ಗೆ ನಮ್ಮ ಅಭ್ಯರ್ಥಿಗೆ ಅರಿವಿದೆ. ಅವರನ್ನು ಆಯ್ಕೆ ಮಾಡಿದರೆ ನಿಮ್ಮ ಸಮಸ್ಯೆಯನ್ನು ಅಧಿವೇಶನದಲ್ಲಿ ಮಂಡಿಸಿ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷರು, ಅಮದಳ್ಳಿ, ತೋಡುರು ಹಾಗೂ ಚೆಂಡಿಯಾ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು, ಬೂತ್ ಪ್ರಮುಖರು ಉಪಸ್ಥಿತರಿದ್ದರು.