ಹಳಿಯಾಳ: ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬoಧಿಸಿದoತೆ ತಾಲೂಕಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.
ಮಾಸ್ಟರ್ ಟ್ರೇನರ್ ಆಗಿರುವ ಪದವಿ ಕಾಲೇಜಿನ ಪ್ರಾಂಶುಪಾಲ ಎಸ್. ಎಸ್ ಅಂಗಡಿ, ಭಾಗವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ವಿಸ್ತಾರವಾಗಿ ತರಬೇತಿ ನೀಡಿದರು. ತರಬೇತಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಉಪವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ತರಬೇತಿಯಲ್ಲಿ ಭಾಗವಹಿಸಿದ ಮತಗಟ್ಟೆ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಚುನಾವಣೆ ಕರ್ತವ್ಯದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಜಾಗರೂಗತೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರು.
ಚುನಾವಣೆ ನಿರ್ವಹಣೆ ಕುರಿತು ಮತಗಟ್ಟೆಗಳಲ್ಲಿ ಪಾಲಿಸಬೇಕಾದ ಪ್ರಮುಖ ಅಂಶಗಳ ಕುರಿತು ಅವಶ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಸಂಜಯ ಕಾಂಬಳೆ ಹಾಗೂ ಎಲ್ಲ ಮತಗಟ್ಟೆಗಳಿಗೆ ನಿಯೋಜಿಸಲಾದ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.