Slide
Slide
Slide
previous arrow
next arrow

ರಾಜ್ಯದಲ್ಲಿ ಓಮಿಕ್ರಾನ್ ಪತ್ತೆ ಹಿನ್ನೆಲೆ; ತಜ್ಞರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

300x250 AD

ಬೆಂಗಳೂರು: ಬೆಂಗಳೂರಿನಲ್ಲಿ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆಯಾಗಿ ಭೀತಿ ಮೂಡಿಸಿದೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಈ ಸೋಂಕು ಕಾಣಿಸಿಕೊಂಡಿರುವುದು ಸರ್ಕಾರದ ಮೇಲೆ ಹೆಚ್ಚಿನ ಒತ್ತಡವನ್ನುಂಡು ಮಾಡಿದೆ. ಈ ಹಿನ್ನೆಲೆಯಲ್ಲಿ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಲು ಮುಂದಾಗಿದೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿ ಸೋಂಕು ನಿಯಂತ್ರಣಕ್ಕೆ ಅಗತ್ಯವಾದ ನಿರ್ಬಂಧಗಳು ಹಾಗೂ ಚಿಕಿತ್ಸೆಗೆ ಅಗತ್ಯವಿರುವ ಸಿದ್ಧತೆಗಳ ಕುರಿತು ತಜ್ಞರೊಂದಿಗೆ ಚರ್ಚೆ ನಡೆಸಲಿದ್ದಾರೆ ಮತ್ತು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಓಮಿಕ್ರಾನ್ ಸೋಂಕು ಹರಡುವಿಕೆಯನ್ನು ತಡೆಯಲು ಹೊಸ ಮಾರ್ಗಸೂಚಿಗಳ ಅವಶ್ಯಕತೆಯಿದೆ ಮತ್ತು ಶುಕ್ರವಾರದ ಸಭೆಯ ನಂತರ ಅವುಗಳ ಕುರಿತು ನಿರ್ಧರಿಸಲಾಗುತ್ತದೆ. ನಮಗೆ ತಿಳಿದುಬಂದಿರುವ ಮಾಹಿತಿಗಳ ಪ್ರಕಾರ ಹೊಸ ರೂಪಾಂತರಿ ಸೋಂಕು ಹರಡಿದರೂ ಸೋಂಕಿನಿಂದ ಆಸ್ಪತ್ರೆಗೆ ಸೇರಿಸುವ ಪರಿಸ್ಥಿತಿಗಳು ಎದುರಾಗುವುದಿಲ್ಲ. ಆದರೂ ನಾವು ವೈದ್ಯಕೀಯ ವರದಿ ಬಂದ ಕೂಡಲೇ ನಿಯಮಗಳಂತೆಯೇ ಚಿಕಿತ್ಸೆಗಳನ್ನು ನೀಡಲು ಕ್ರಮಗಳನ್ನು ಕೈಗೊಳ್ಳುತ್ತೇವೆಂದು ಸಿಎಂ ತಿಳಿಸಿದ್ದಾರೆ.

300x250 AD

ಬೊಮ್ಮಾಯಿ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ.

ನಿನ್ನೆ ಸಿಎಂ ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯಾ ಅವರನ್ನು ಭೇಟಿಯಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

Share This
300x250 AD
300x250 AD
300x250 AD
Back to top