• Slide
    Slide
    Slide
    previous arrow
    next arrow
  • ರಾಜ್ಯದಲ್ಲಿ ಒಮಿಕ್ರಾನ್ ಭೀತಿ; ನೂತನ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

    300x250 AD

    ಬೆಂಗಳೂರು: ದೇಶದಲ್ಲೇ ಮೊದಲ ಬಾರಿ ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ಕೋವಿಡ್ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ.

    ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಲವು ಸಚಿವರು ಮತ್ತು ತಜ್ಞರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ವರದಿಯ ಪ್ರಕಾರ ಒಮಿಕ್ರಾನ್ ಹೆಚ್ಚಿನ ತೀವ್ರತೆ ಹೊಂದಿಲ್ಲ. ಇದಿರಂದ ಯಾವುದೇ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದರು.

    300x250 AD

    ನಿಯಮಗಳು:
    * ವಿಮಾನ ನಿಲ್ದಾಣದಲ್ಲಿ ಪ್ರತಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಪರೀಕ್ಷೆ ವರದಿ ಬಂದ ನಂತರವೇ ಪ್ರಯಾಣಿಕರನ್ನು ಹೊರಗೆ ಬಿಡಲಾಗುವುದು.
    * ಸಿನಿಮಾ ಹಾಲ್, ಮಾಲ್ ಗಳಿಗೆ ಪ್ರವೇಶಿಸಲು ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ.
    * ಶಾಲೆಗೆ ಹೋಗುವ ಮಕ್ಕಳಿರುವ ಹೆತ್ತವರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಇಲ್ಲದಿದ್ದಲ್ಲಿ ಶಾಲೆಗೆ ಮಕ್ಕಳನ್ನು ಕಳುಹಿಸುವಂತಿಲ್ಲ.
    * ಶಾಲೆ ಕಾಲೇಜುಗಳಲ್ಲಿ ಯಾವುದೇ ಸಮಾರಂಭ ನಡೆಸಲು ಅವಕಾಶವಿಲ್ಲ.
    * ಮದುವೆ ಸಮಾರಂಭಗಳಿಗೆ 500 ಜನರಿಗೆ ಮಾತ್ರ ಅವಕಾಶ.

    ಕಂಟ್ರೋಲ್ ರೂಂ ಮತ್ತೆ ಆರಂಭ ಮಾಡಲಾಗುವುದು. ಪ್ರತಿ ದಿನ ಒಂದು ಲಕ್ಷ ಟೆಸ್ಟ್ ಮಾಡಲು ತೀರ್ಮಾನ ಮಾಡಲಾಗಿದೆ. ಕೋವಿಡ್ 2 ಅಲೆಯ ಸಂದರ್ಭದಲ್ಲಿ ಮಾಡಿರುವ ಆಕ್ಸಿಜನ್ ಹಾಗೂ ಐಸಿಯು ಬೆಡ್ ಸಿದ್ಧಗೊಳಿಸಲು ಸೂಚನೆ ನೀಡಲಾಗಿದೆ. ಕಳೆದ ಬಾರಿ ಉಂಟಾದ ಔಷಧಿಯ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗವುದು ಎಂದು ಆರ್.ಅಶೋಕ್ ಹೇಳಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top