ಶಿರಸಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಪ್ರತಿಯೊಂದು ಜಿಲ್ಲೆಗೂ ಸದಸ್ಯತ್ವ ನೊಂದಣಿ ವೀಕ್ಷಕರನ್ನು ನೇಮಿಸಿದೆ.
ಅದರಂತೆ ಜಿಲ್ಲೆಗೆ ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಕೆಪಿಸಿಸಿ ಕಾರ್ಯದರ್ಶಿಗಳಾದ ಮುರಳಿ ಶೆಟ್ಟಿ, ದೇವೇಂದ್ರಪ್ಪ ಹಾಗೂ ಕೆಪಿಸಿಸಿ ಸಂಯೋಜ-ಕ ಶೋಹಿಬ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಕೆ.ಪಿ.ಸಿ.ಸಿ ವಕ್ತಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿವೇದಿತ್ ಆಳ್ವಾ ಅವರನ್ನು ಧಾರವಾಡ ಗ್ರಾಮಂತರಕ್ಕೆ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.ಅವರೊಂದಿಗೆ ಮಾಜಿ ಶಾಸಕ ನಾಗರಾಜ ಛಬ್ಬಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇಮಕಾತಿಯ ಆದೇಶ ನೀಡಿದ್ದಾರೆ. ಡಿ.11 ರಂದು ಏಕಕಾಲದಲ್ಲಿ ರಾಜ್ಯಾದ್ಯಂತ ಎಲ್ಲಾ ಬೂತ್‍ಗಳಲ್ಲಿ ಸದಸ್ಯತ್ವನೊಂದಣಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.