Slide
Slide
Slide
previous arrow
next arrow

ಕೇಂದ್ರ ಸೂಚನೆ; ಓಮಿಕ್ರಾನ್ ವೈರಸ್ ತಡೆಗೆ ರಾಜ್ಯಗಳ ಹೆಚ್ಚಿನ ನಿಗಾ ಅಗತ್ಯ

300x250 AD

ನವದೆಹಲಿ: ಕೋವಿಡ್-19 ನ ಓಮಿಕ್ರಾನ್ ರೂಪಾಂತರದ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಬಿಗಿಯಾಗಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ

300x250 AD

ಅಂತರರಾಷ್ಟ್ರೀಯ ಪ್ರಯಾಣಿಕರು ಓಮಿಕ್ರಾನ್ ಅಪಾಯದಲ್ಲಿರುವ ಮತ್ತು ಇತರ ದೇಶಗಳಿಂದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆಗಮಿಸುತ್ತಿದ್ದಾರೆ. ಎಲ್ಲಾ ರಾಜ್ಯಗಳ ಕಣ್ಗಾವಲು ಅಧಿಕಾರಿಗಳಿಗೆ ನಾಗರಿಕ ವಿಮಾನಯಾನ ಸಚಿವಾಲಯದ ಏರ್ ಸುವಿಧಾ ಪೆÇೀರ್ಟಲ್‍ಗೆ ಪ್ರವೇಶವನ್ನು ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿವಿಧ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಂದ ತಮ್ಮ ರಾಜ್ಯಕ್ಕೆ ಬರುವ ಪ್ರಯಾಣಿಕರ ವಿವರಗಳನ್ನು ಮುಂಚಿತವಾಗಿ ತಿಳಿದುಕೊಳ್ಳಲು ಪ್ರತಿ ದಿನ ಪೆÇೀರ್ಟಲ್ ಅನ್ನು ಪ್ರವೇಶಿಸಲು ಭೂಷಣ್ ರಾಜ್ಯಗಳಿಗೆ ಮನವಿ ಮಾಡಿದ್ದಾರೆ.

Share This
300x250 AD
300x250 AD
300x250 AD
Back to top