• first
  second
  third
  previous arrow
  next arrow
 • ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹ; ಪಿಎಂ ಮೋದಿಗೆ ಮನವಿ

  300x250 AD

  ಅಂಕೋಲಾ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‍ನ ಅಂಕೋಲಾ ತಾಲೂಕು ಸಮಿತಿಯವರು ವಿವಿಧ ಬೇಡಿಕೆಗೆ ಆಗ್ರಹಿಸಿ ಶುಕ್ರವಾರ ತಹಸೀಲ್ದಾರರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

  1996ರ ಕಟ್ಟಡ ನಿರ್ಮಾಣ ಕಾನೂನು ಹಾಗೂ ಸೆಸ್ ಕಾನೂನು ಮತ್ತು 1979ರ ಅಂತಾರಾಜ್ಯ ವಲಸೆ ಕಾರ್ಮಿಕ ಕಾಯ್ದೆಗಳನ್ನು ಮರು ಸ್ಥಾಪಿಸಬೇಕು. ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುವ ಸರಕು ಸೇವಾ ತೆರಿಗೆ ಕಡಿತಗೊಳಿಸಬೇಕು. ಆ ಮೂಲಕ ಕಟ್ಟಡ ನಿರ್ಮಾಣ ವಲಯ ಹಾಗೂ ಕಟ್ಟಡ ಕಾರ್ಮಿಕರ ಬದುಕನ್ನು ರಕ್ಷಿಸಬೇಕು. ಕಟ್ಟಡ ನಿರ್ಮಾಣ ವಲಯವು 2016 ನವೆಂಬರ್‍ನಲ್ಲಿ ತಮ್ಮ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೋಟು ಅಮಾನ್ಯೀಕರಣ ಬಳಿಕ ಕಾರ್ಮಿಕರು ಕಷ್ಟಪಡುವಂತಾಯಿತು. ಸರಕಾರ ಜಾರಿ ಮಾಡಿದ ಸರಕು ಸೇವಾ ತೆರಿಗೆ ನೀತಿಯಿಂದಾಗಿ ನಿರ್ಮಾಣ ವಲಯ ಮತ್ತಷ್ಟು ತೀವ್ರ ಬಿಕ್ಕಟ್ಟಿಗೆ ಸಿಲುಕಿತು.

  ಇದರ ಜೊತೆಗೆ ಇತ್ತೀಚಿಗೆ ನಿರಂತವಾಗಿ ಏರಿಕೆಯಾಗುತ್ತಿರುವ ಡಿಸೇಲ್ ಹಾಗೂ ಪೆಟ್ರೋಲಿಯಂ ತೈಲ ಬೆಲೆಗಳು ನಿರ್ಮಾಣ ವಲಯದ ಮೇಲೆ ಗಂಭೀರ ಪರಿಣಾಮ ಬೀರಿ ಲಕ್ಷಾಂತರ ಉದ್ಯೋಗಗಳ ನಾಶಕ್ಕೆ ಕಾರಣವಾಗಿದೆ. ನಮ್ಮ ದೇಶದಲ್ಲಿ ಕೃಷಿಕ್ಷೇತ್ರದ ಬಳಿಕ ಅತಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಿರುವ ನಿರ್ಮಾಣ ವಲಯದಲ್ಲಿ ಸುಮಾರು 10 ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ. ಇವರು ಕರೋನಾ ಲಾಕ್‍ಡೌನ್‍ನಲ್ಲಿ ಅತಿ ಹೆಚ್ಚು ತೊಂದರೆಗೊಳಪಟ್ಟ ಶ್ರಮಜೀವಿಗಳು. ಆದರೆ ಕರೊನ್ನೋತ್ತರ ಕಾಲಘಟ್ಟದಲ್ಲೂ ಅವರ ಸಂಕಷ್ಟಗಳು ದೂರವಾಗಿಲ್ಲ.

  300x250 AD

  ಕೃಷಿ ಕ್ಷೇತ್ರದ ಬಳಿಕ ಅತಿ ಹೆಚ್ಚು ಉದ್ಯೋಗ ಕಲ್ಪಿಸುವ ಕಟ್ಟಡ ನಿರ್ಮಾಣ ಉದ್ಯಮವನ್ನು ರಕ್ಷಿಸಬೇಕು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು 1996 ಹಾಗೂ. ಹಾಗೂ ಸೆಸ್ ಕಾನೂನು 1996 ಕಾನೂನು ಪುನರ್ ಸ್ಥಾಪಿಸಬೇಕು. ದೇಶದ್ಯಾಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಲ್ಯಾಣ ಮಂಡಳಿ ಉಳಿಸಿ ಬಲಪಡಿಸಬೇಕು. ನಿರಂತರವಾಗಿ ಏರಿಕೆಯಾಗುತ್ತಿರುವ ಸಿಮೆಂಟ್, ಕಬ್ಬಿಣ, ಮೊದಲಾದ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು ಹಾಗೂ ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ ಕಡಿತಗೊಳಿಸಬೇಕು. ಅಂತರ ರಾಜ್ಯ ವಲಸೆ ಕಾರ್ಮಿಕರ ಕಾನೂನು 1979 ರ ಪರಿಣಾಮಕಾರಿ ಜಾರಿ ಮಾಡಬೇಕು ಎಂದು ಅವರು ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

  ತಹಸೀಲ್ದಾರರ ಪರವಾಗಿ ಶಿರಸ್ತೇದಾರ ಗಿರೀಶ ಬಾನಾವಳಿಕರ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಸಂಘದ ಕಾರ್ಯದರ್ಶಿ ರಾಜು ಗೌಡ, ಉಪಾಧ್ಯಕ್ಷ ನಾಗಪ್ಪ ನಾಯ್ಕ, ಜಂಟಿ ಕಾರ್ಯದರ್ಶಿ ಉದಯ ನಾಯ್ಕ, ಸಮಿತಿ ಸದಸ್ಯರಾದ ಶೇಸು ನಾಯ್ಕ, ಬೊಮ್ಮಯ್ಯ ನಾಯ್ಕ, ಗಣೇಶ ಪಟಗಾರ, ದಿನಕರ ನಾಯ್ಕ, ನಿತ್ಯಾನಂದ ನಾಯ್ಕ ಮುಂತಾದವರು ಹಾಜರಿದ್ದರು.

  Share This
  300x250 AD
  300x250 AD
  300x250 AD
  Back to top